ರಸ್ತೆ ವಿಭಜಕಕ್ಕೆ ಪಿಂಕ್ ಹೊಯ್ಸಳ ಡಿಕ್ಕಿ

Pink hoysala police van accident: 2 injured

02-07-2018

ಬೆಂಗಳೂರು: ನಗರದ ನ್ಯೂಬಿಇಎಲ್ ರಸ್ತೆಯಲ್ಲಿ ನಿನ್ನೆ ಮಧ್ಯರಾತ್ರಿ ವೇಗವಾಗಿ ಹೋಗುತ್ತಿದ್ದ ಪಿಂಕ್ ಹೊಯ್ಸಳ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮಹಿಳಾ ಪೊಲೀಸ್ ಸೇರಿ ಇಬ್ಬರು ಪೇದೆಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡಿರುವ ಸದಾಶಿವನಗರ ಪೊಲೀಸ್ ಠಾಣೆಯ ಪೇದೆಗಳಾದ ನಾಗರತ್ನ ಹಾಗೂ ಉಮೇಶ್ ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಗರತ್ನ ಅವರು ಉಮೇಶ್ ಅವರು ಚಾಲಕರಾಗಿದ್ದ ಪಿಂಕ್ ಹೊಯ್ಸಳದಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದಾಗ ನ್ಯೂಬಿಇಎಲ್ ರಸ್ತೆಯ ಬಳಿ ವೇಗವಾಗಿ ಹೋಗಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿರುವ ಸದಾಶಿವನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

police lady constable ದುರ್ಘಟನೆ ಪ್ರಕರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ