ಸಂಸದ ಕೆ.ಎಚ್.ಮುನಿಯಪ್ಪ ಸಂಬಂಧಿ ಕಾರು ಡಿಕ್ಕಿ: ಬಾಲಕಿ ಸಾವು

Accident: A student died in front of school

02-07-2018

ಬೆಂಗಳೂರು: ಚಿಂತಾಮಣಿಯ ಕೋನೆಪಲ್ಲಿಗೇಟ್ ಬಳಿ ಇಂದು ಬೆಳಿಗ್ಗೆ ಕೋಲಾರ ಸಂಸದ ಕೆ.ಎಚ್ ಮುನಿಯಪ್ಪ ಅವರ ಸಂಬಂಧಿಯ ಕಾರು ಬೈಕ್‍ಗೆ ಡಿಕ್ಕಿಯಾಗಿ ಶಾಲಾ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಶಾಲೆ ಎದುರೇ 8ನೇ ತರಗತಿ ವಿದ್ಯಾರ್ಥಿನಿ ಸೃಷ್ಠಿ ಸಾವನ್ನಪ್ಪಿದ್ದಾಳೆ. ಸಂಸದ ಕೆ.ಹೆಚ್ ಮುನಿಯಪ್ಪ ಅವರ ಬಾಮೈದ ಶ್ರೀನಿವಾಸ್ ಎಂಬುವವರ ಕಾರು ಬಾಲಕಿಗೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ.

ಕಾರು ಚಾಲಕನ ಅಜಾಗರುಕತೆಯಿಂದ ಕಾರು ಡಿಕ್ಕಿಯಾಗಿದೆ.  ಬೈಕ್ ಗೂ ಸಹ ಕಾರು ಡಿಕ್ಕಿಯಾಗಿದ್ದು ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಇನ್ನು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯನ್ನ ಖಂಡಿಸಿ ಸಾರ್ವಜನಿಕರು ಚಿಕ್ಕಬಳ್ಳಾಪುರ ಚಿಂತಾಮಣಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

K.H.Muniyappa school girl ಅಜಾಗರುಕತೆ ಬಾಲಕಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ