6ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ: 16 ಮಹಿಳೆಯರು ಅಸ್ವಸ್ಥ

6th day of contract labours Protest : 16 women admitted to hospital

02-07-2018

ಬೆಂಗಳೂರು: ಸರ್ಕಾರಿ ವಸತಿ ಶಾಲೆ ಹೊರಗುತ್ತಿಗೆ ನೌಕರರನ್ನು ಏಕಾಏಕಿ ವಜಾ ಮಾಡುತ್ತಿರುವ ಕ್ರಮವನ್ನು ಖಂಡಿಸಿ ನಗರದಲ್ಲಿ ನಡೆಸುತ್ತಿರುವ ಪ್ರತಿಭಟನೆಯು ತೀವ್ರಗೊಂಡಿದ್ದು ಪ್ರತಿಭಟನಾ ನಿರತ 16 ಮಹಿಳಾ ನೌಕರರು ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥರಾಗಿ ಪ್ರತಿಭಟನಾಕಾರರಾದ ದೊಡ್ಡಬಳ್ಳಾಪುರದ ಲಕ್ಷ್ಮಮ್ಮ್ಮ ಸೇರಿದಂತೆ ಒಟ್ಟು 16 ಮಹಿಳೆಯರು ಅಸ್ವಸ್ಥರಾಗಿ ನಗರದ ಕೆಸಿ ಜನರಲ್ ಆಸ್ಪತ್ರೆಯ ಸಾಮಾನ್ಯ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಳೆಯಿಂದಾಗಿ ಪ್ರತಿಭಟನಾಕಾರರಲ್ಲಿ ಜ್ವರ, ನೆಗಡಿ, ಕೆಮ್ಮು ಹಾಗೂ ನಿಶಕ್ತಿ ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ, ಘಟನಾ ಸ್ಥಳದಲ್ಲಿಯೇ ಆಂಬ್ಯುಲೆನ್ಸ್ ವಾಹನಯೊಂದನ್ನು ನಿಲ್ಲಿಸಿ, ಕೆಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ನಡುವೆ ಪ್ರತಿಭಟನೆಯು 6ನೆ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನಾ ನಿರತರಿಗೆ ಮೂಲಭೂತ ಸೌಲಭ್ಯಗಳಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸ್ವಾತಂತ್ರ ಉದ್ಯಾನವನ ಮೈದಾನದಲ್ಲಿಯೇ ಉಳಿದಿರುವ ನೂರಾರು ಮಹಿಳಾ ಪ್ರತಿಭಟನಾಕಾರರಿಗೆ ರಾತ್ರಿ ವೇಳೆ ರಕ್ಷಣೆ ಇಲ್ಲದಂತಾಗಿದೆ. ಇನ್ನೂ ಸೂಕ್ತ ರೀತಿಯಲ್ಲಿ ಕುಡಿಯುವ ನೀರಿನ ಹಾಗೂ ಶೌಚಾಲಯದ ವ್ಯವಸ್ಥೆ ಇಲ್ಲ. ಜೊತೆಗೆ ಸೊಳ್ಳೆ ಕಾಟವೂ ಹೆಚ್ಚಾಗಿದ್ದು, ಮಹಿಳಾ ಪೇದೆಗಳ ಸಂಖ್ಯೆಯೂ ಕಡಿಮೆ ಇದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಹೋರಾಟಗಾರರನ್ನು ಕರೆಯಿಸಿ ಈಗಾಗಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಹೊರಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕುವುದನ್ನು ಕೂಡಲೇ ನಿಲ್ಲಿಸುವ ಕುರಿತು ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆದರೆ, ನಮಗೆ ಆಶ್ವಾಸನೆ ಬೇಡ, ಆದೇಶ ಹೊರಡಿಸಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾಗಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

contract basics wage ಆರೋಗ್ಯ ಉದ್ಯಾನವನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ