ಸಮ್ಮಿಶ್ರ ಸರ್ಕಾರ ಟೇಕಾಫ್ ಆಗುವ ಲಕ್ಷಣಗಳು ಕಾಣಿಸುತ್ತಿಲ್ಲ: ಬಿಎಸ್ವೈ

B.S.Yeddyurappa

02-07-2018

ಬೆಂಗಳೂರು: ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದ ರಾಜ್ಯಪಾಲರ ಭಾಷಣ ಕೇವಲ ಔಪಚಾರಿಕವಾಗಿದ್ದು, ಸರ್ಕಾರದ ಉದ್ದೇಶವೇ ಅರ್ಥವಾಗುತ್ತಿಲ್ಲ ಎಂದು ಪ್ರತಿಪಕ್ಷಗಳು ಟೀಕಿಸಿವೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಸರ್ಕಾರ ಟೇಕಾಫ್ ಆಗುವ ಯಾವುದೇ ಲಕ್ಷಣಗಳು ರಾಜ್ಯಪಾಲರ ಭಾಷಣದಲ್ಲಿ ಕಾಣಿಸುತ್ತಿಲ್ಲ. ಎರಡೂ ಪಕ್ಷಗಳ ನಡುವೆ ಹೊಂದಾಣಿಕೆಯೂ ಕಂಡು ಬರುತ್ತಿಲ್ಲ. ರೈತರ ಸಾಲ ಮನ್ನಾ ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಕೇಂದ್ರ ಸರ್ಕಾರದ ಉಜ್ವಲ ಯೋಜನೆಯನ್ನು ತಮ್ಮದೇ ಯೋಜನೆ ಎಂಬಂತೆ ಬಿಂಬಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯಪಾಲರದ್ದು ಕೇವಲ ಕಾಟಾಚಾರದ ಭಾಷಣವಾಗಿದೆ. ರೈತರ ಸಾಲ ಮನ್ನಾ ಬಗ್ಗೆ ಸಣ್ಣ ಚಕಾರವೂ ಇದರಲ್ಲಿ ಇಲ್ಲ. ರೈತ ವಿರೋಧಿ ನೀತಿ ಮುಂದುವರಿದ್ದು, ಪ್ರಾದೇಶಿಕ ಅಸಮಾನತೆ ವಿಷಯದಲ್ಲೂ ಉಲ್ಲೇಖವಿಲ್ಲ. ಕಳಸಾಬಂಡೂರಿ ಮಹಾದಾಯಿ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಸ್ಪಷ್ಟವಾಗಿಲ್ಲ. ಯಾವುದೇ ದೃಷ್ಟಿಕೋನವಾಗಲಿ, ಸೂಕ್ತ ನಿಲುವಾಗಲಿ ಈ ಸರ್ಕಾರಕ್ಕೆ ಇಲ್ಲ ಎಂದು ಟೀಕಿಸಿದರು.

 

 

 


ಸಂಬಂಧಿತ ಟ್ಯಾಗ್ಗಳು

B.S.Yeddyurappa speech ನಿರರ್ಥಕ ಭಾಷಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ