ನಾನಾ ತಂತ್ರಗಳೊಂದಿಗೆ ಅಧಿವೇಶನಕ್ಕೆ ಬಿಜೆಪಿ ರೆಡಿ!

Karnataka assembly session: congress-JDS v/s BJP

03-07-2018

ಬೆಂಗಳೂರು: ಇಂದು‌ ಮೈತ್ರಿ ಸರ್ಕಾರದ ಎರಡನೇ ದಿನದ ಅಧಿವೇಶನ ನಡೆಯಲಿದ್ದು, ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಎರಡೂ ಕಡೆಗಳಲ್ಲಿ ಚರ್ಚೆ ನಡೆಯಲಿದೆ. ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಹೊಸತನ ಇರಲಿಲ್ಲ ಎಂದು ಟೀಕೆ ಮಾಡುತ್ತಿರುವ ಪ್ರತಿಪಕ್ಷ ಬಿಜೆಪಿ. ಇದನ್ನೇ ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ನಿನ್ನೆ ನಡೆದ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಹಳೆಯ ಹಾಗೂ ಹೊಸ ಶಾಸಕರನ್ನು ಹುರಿಗೊಳಿಸಿರುವ ಬಿಜೆಪಿ. ಇಂದು ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು‌ ನಾನಾ ತಂತ್ರಗಳನ್ನು ರೂಪಿಸಿದೆ ಎಂದೆನ್ನಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ