ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗುತ್ತಾ ಸಿದ್ದು ಔತಣ ಕೂಟ..?

Dinner party for congress MLAs today with siddaramaiah

03-07-2018

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕರಿಗೆ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದಾರೆ. ಈ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಹಲವಾರು ಮಾತುಗಳು ಕೇಳಿಬರುತ್ತಿವೆ. ಒಂದೆಡೆ ಈ ಔತಣ ಕೂಟ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗುತ್ತಾ ಎಂಬ ಕುತೂಹಲ ಕೂಡ ಮೂಡಿದೆ. ಹನ್ನೆರಡು ದಿನಗಳ ಚಿಕಿತ್ಸೆ ಬಳಿಕ ಸಿದ್ದರಾಮಯ್ಯನವರು ಬೆಂಗಳೂರಿಗೆ ಬಂದ ನಂತರ, ಅವರೊಂದಿಗೆ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿ ಸಮ್ಮಿಶ್ರ ಸರ್ಕಾರದ ವಿರುದ್ಧದ ಅವರ ಅಸಮಾಧಾನವನ್ನು ಶಮನಗೊಳಿಸಿದ್ದರು. ಇದೀಗ ಕಾಂಗ್ರೆಸ್ ಶಾಸಕರುಗಳಿಗೆ ಸಿದ್ದರಾಮಯ್ಯನವರು ಔತಣಕೂಟ ಏರ್ಪಡಿಸಿದ್ದು, ಬಜೆಟ್ ಸಂದರ್ಭದಲ್ಲಿ ಶಾಸಕರು ಯಾವ ರೀತಿ ಸರ್ಕಾರದ ಬೆಂಬಲಕ್ಕೆ ನಿಲ್ಲಬೇಕೆಂಬುದರ ಕುರಿತು ಸೂಚನೆ ನೀಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

siddaramaiah congress ಸಮ್ಮಿಶ್ರ ಸರ್ಕಾರ ಬೆಂಬಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ