4ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

A man jumped from 4th floor and died

03-07-2018

ಬೆಂಗಳೂರು: ಮಾನಸಿಕ ಖಿನ್ನತೆಗೊಳಗಾಗಿದ್ದ ಗಾರೆ ಕೆಲಸಗಾರ ಲಕ್ಷ್ಮಣ್ ಎಂಬಾತ ಕಟ್ಟಡವೊಂದರ 4ನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಿದ್ದ ರಾಯಚೂರಿನ ಮಸ್ಕಿ ಮೂಲದ ಲಕ್ಷ್ಮಣ್ (30), ತಾನು ಗಾರೆ ಕೆಲಸ ಮಾಡುತ್ತಿದ್ದ ಕಟ್ಟಡದ 4ನೇ ಮಹಡಿಯಿಂದ ಮುಂಜಾನೆ 5ರ ವೇಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಲಕ್ಷ್ಮಣ್, ಮನೆಯವರೊಂದಿಗೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಎಲೆಕ್ಟ್ರಾನಿಕ್ ಸಿಟಿಯ ಮಣಿಪಾಲ ಕೌಂಟಿ ಬಳಿ ಇರುವ ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಮುಂಜಾನೆ 5ರ ವೇಳೆ ಕೆಳಗೆ ಜಿಗಿದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Suicide labourer ನಿರ್ಮಾಣ ಖಿನ್ನತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ