ಶಾರ್ಟ್ ಸರ್ಕ್ಯೂಟ್: ಕೆಎಸ್ಆರ್ಟಿಸಿ ಬಸ್ ಬೆಂಕಿಗಾಹುತಿ

short circuit KSRTC bus burned: passengers safe

04-07-2018

ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ಸುಟ್ಟುಹೋಗಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಗೆಗೆ ಬಸ್ ಆಹುತಿಯಾಗಿದೆ. ವಾಯವ್ಯ ಸಾರಿಗೆ ಸಂಸ್ಥೆಯ ಗದಗ ಜಿಲ್ಲೆಯ ಮುಂಡರಗಿ ಘಟಕಕ್ಕೆ ಸೇರಿದ ಬಸ್ ಸುಟ್ಟು ಕರಕಲಾಗಿದೆ.  ನಿನ್ನೆ ರಾತ್ರಿ 10ರ ಸಮಯದಲ್ಲಿ ಗೋವಾದಿಂದ ಮುಂಡರಗಿ ಕಡೆಗೆ ಈ ಬಸ್ ಬರುತ್ತಿತ್ತು, ಈ ವೇಳೆ ಸುಮಾರು 11ರ ಸಮಯದಲ್ಲಿ ಗೋವಾದ ಪೋಂಡಾ ಬಳಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಬಸ್ ಚಾಲಕ ಕೂಡಲೆ ಬಸ್ ನಿಲ್ಲಿಸಿ ಪ್ರಯಾಣಿಕರೆಲ್ಲರನ್ನೂ ಬಸ್ ನಿಂದ ಕೆಳಗೆ ಇಳಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಪ್ರಯಾಣಿಕರ ಅಪಾರ ಪ್ರಮಾಣದ ಬೆಲೆಬಾಳುವ ವಸ್ತುಗಳು ಬೆಂಕಿಗಾಹುತಿಯಾಗಿವೆ. ಆದರೆ, ಅದೃಷ್ಟವಶಾತ್ ಭಾರೀ ಅನಾಹುತ ಒಂದು ತಪ್ಪಿದೆ.


ಸಂಬಂಧಿತ ಟ್ಯಾಗ್ಗಳು

KSRTC Burnt ಶಾರ್ಟ್ ಸರ್ಕ್ಯೂಟ್ ಅನಾಹುತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ