ತಲ್ವಾರ್ ನಿಂದ ಕೇಕ್ ಕಟ್ ಮಾಡಿದ ಬಿಜೆಪಿ ಮುಖಂಡ!

An BJP leader was cut cake from Talwar!

04-07-2018

ವಿಜಯಪುರ: ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ ಬಿಜೆಪಿ ಮುಖಂಡರೊಬ್ಬರು. ಘಟನೆ ಕಳೆದ ಜೂನ್ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ನಗರ ಘಟಕದ ಬಿಜೆಪಿ ಅಧ್ಯಕ್ಷ ಶಿವರುದ್ರ ಬಾಗಲಕೋಟ ಅವರು ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಯಡವಟ್ಟು ಮಾಡಿಕೊಂಡಿದ್ದಾರೆ. ಜೂನ್ 29ರಂದು ಶಿವರುದ್ರ ಅವರ ಹುಟ್ಟುಹಬ್ಬದ ನಿಮಿತ್ತ ಅಭಿಮಾನಿಗಳು, ಕಾರ್ಯಕರ್ತರು ಆಚರಣೆಗೆಂದು ಕೇಕ್ ತಂದಿದ್ದು, ಈ ವೇಳೆ ಚಾಕುವಿನಿಂದ ಕೇಕ್ ಕಟ್ ಮಾಡದೆ ತಲ್ವಾರ್ನಿಂದ ಕಟ್ ಮಾಡಿದ್ದಾರೆ. ತಲ್ವಾರ್ ನಿಂದ ಕೇಕ್ ಕಟ್ ಮಾಡಿದ್ದ ಫೊಟೋಗಳನ್ನು ತಮ್ಮ ವಾಟ್ಸಾಪ್ ಸ್ಟೇಟಸ್ ಗೆ ಹಾಕಿಕೊಂಡಿದ್ದರು ಎನ್ನಲಾಗಿದ್ದು,  ಫೋಟೋಗಳು ವೈರಲ್ ಆಗುತ್ತಿದ್ದಂತೆ ಈ ವಿಚಾರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪಗಳು ವ್ಯಕ್ತವಾಗುತ್ತಿವೆ. ಇಂತಹವರಿಗೆ ತಿಳುವಳಿಕೆ ಹಾಗೂ ಎಚ್ಚರಿಕೆ ನೀಡಿ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದೆ ಎಂದು ಘಟನೆ ಕುರಿತು ಅಸಮಾಧಾನ ವ್ಯಕ್ತವಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

cake Talvar ಕಣ್ಮುಚ್ಚಿ ಎಚ್ಚರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ