ಗೋವಿಂದ ಕಾರಜೋಳಗೆ ಹೆಚ್.ಡಿ.ರೇವಣ್ಣ ಟಾಂಗ್

H.D Revanna tong to MLA Govind Karjol in vidhan sabha session

04-07-2018

ಬೆಂಗಳೂರು: ರಾಜ್ಯದಲ್ಲಿ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅತಿ ಹೆಚ್ಚು ಅನುದಾನ ನೀಡಿದೆ ಎಂದು ವಿಧಾನ ಸಭೆಯಲ್ಲಿ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಹೇಳಿಕೆ ನೀಡುತ್ತಿದ್ದಂತೆ, ಇದಕ್ಕೆ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಟಾಂಗ್ ನೀಡಿದ್ದಾರೆ. ಗೋವಿಂದ ಕಾರಜೋಳ ಅವರಿಗೆ ಉತ್ತರ ನೀಡಿದ ಸಚಿವರು, ಕೇಂದ್ರ ರಸ್ತೆ ನಿಧಿ (ಸಿ.ಆರ್.ಎಫ್) ನಿಂದ ಕೇಂದ್ರ ಸರ್ಕಾರ ಏಳು ಸಾವಿರ ಕೋಟಿ ಮಂಜೂರು ಮಾಡಿದೆ. ಪ್ರತಿ ವರ್ಷಕ್ಕೆ 500 ಕೋಟಿಯಂತೆ ಹಣ ಬಿಡುಗಡೆ ಮಾಡುತ್ತಿದೆ. ಪೂರ್ಣ ಹಣ ನಮ್ಮ ಕೈ ಸೇರಬೇಕಾದರೆ 14 ವರ್ಷ ಬೇಕಾಗುತ್ತದೆ ಎಂದು ಟಾಂಗ್ ಕೊಟ್ಟರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಖರ್ಚಾಗಿದೆ ಸಂಪೂರ್ಣ ವಿವರ ನೀಡಿ ಎಂದು ಒತ್ತಾಯಿಸಿದರು. ಜಗದೀಶ್ ಶೆಟ್ಟರ್ ಗೆ ಈಶ್ವರಪ್ಪ ಹಾಗೂ ಸಿ.ಎಂ.ಉದಾಸಿ ಸಾಥ್‌ ನೀಡಿದರು. ಕೇಂದ್ರ ಸರ್ಕಾರದಿಂದ ಬಂದಿರುವ ಅನುದಾನದ ಬಗ್ಗೆ ಶ್ವೇತ ಪತ್ರ ಹೊರಡಿಸಲು ಬಿಜೆಪಿ ಆಗ್ರಹ ಮಾಡಿತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ