ಶೀಘ್ರದಲ್ಲೇ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳ ನೇಮಕ

krishna byre gowda said soon will appoint PDO

04-07-2018

ಬೆಂಗಳೂರು: ಎರಡು ತಿಂಗಳೊಳಗೆ ಒಂದು ಸಾವಿರದ 624 ಪಂಚಾಯಿತಿ ಅಭಿವೃಧ್ಧಿ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣ ಬೈರೇಗೌಡ ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ.

ಸದಸ್ಯ ಎಂ.ಕೆ.ಪ್ರಾಣೇಶ್ ಅವರ ಗಮನ ಸೆಳೆಯುವ ಸೂಚನೆಯಡಿ ಉತ್ತರಿಸಿದ ಸಚಿವರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನೇಮಕದಿಂದ ಕೆಲಸದ ಒತ್ತಡ ತಗ್ಗಲಿದೆ ಎಂದು ತಿಳಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಆದೇಶ ಹೊರಡಿಸಲಾಗಿತ್ತು. ಆದರೆ, ಮೀಸಲಾತಿ ವಿಚಾರದಲ್ಲಿ ಗೊಂದಲ ಉಂಟಾಗಿರುವುದರಿಂದ ಈ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಿಲ್ಲ. ಶೀಘ್ರದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯದ 6022 ಗ್ರಾಮ ಪಂಚಾಯಿತಿಗಳ ಪೈಕಿ 2579 ಗ್ರಾಮ ಪಂಚಾಯಿತಿಗಳಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಇನ್ನುಳಿದ 3443 ಗ್ರಾಮ ಪಂಚಾಯಿತಿಗಳಿಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

PDO krishna byre gowda ದ್ವಿತೀಯ ದರ್ಜೆ ಹುದ್ದೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ