ನವ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

Newly married couple committed suicide

05-07-2018

ಚಿಕ್ಕಬಳ್ಳಾಪುರ: ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ನವ ದಂಪತಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಸಾಂಸಾರಿಕ ಜೀವನದಲ್ಲಿ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಮಂಚೇನಹಳ್ಳಿ ವ್ಯಾಪ್ತಿಯ ಹಳೆ ಬುದ್ಧಿವಂತಹಳ್ಳಿ ಗ್ರಾಮದ ನರಸಿಂಹ ಮೂರ್ತಿ(24), ಅಮೃತ (20) ಮೃತ ದುರ್ದೈವಿಗಳು. ಮೂರು ತಿಂಗಳ ಹಿಂದೆ ಕುಟುಂಬಸ್ಥರ ಒಪ್ಪಿಗೆಯೊಂದಿಗೆ, ಕುಟುಂಬಸ್ಥರ ಸಮ್ಮುಖದಲ್ಲೇ ಮದುವೆ ಮಾಡಿಕೊಂಡಿದ್ದರು. ಆದರೆ ಇದೀಗ ಇಬ್ಬರೂ ಸಾವಿಗೆ ಶರಣಾಗಿದ್ದಾರೆ. ಮಂಚೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

suicide couple ಮದುವೆ ಗ್ರಾಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ