ಕೆಎಸ್ಆರ್ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ

Accident between a bike and Ksrtc Bus

05-07-2018

ಮೈಸೂರು: ಹುಣಸೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹುಲ್ಲೇನಹಳ್ಳಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ಮುಖಾ ಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹುಣಸೂರು ತಾಲ್ಲೂಕಿನ ಮಧುಗಿರಿ ಕೊಪ್ಪಲುವಿನ ದೇವು (28) ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಖಾಸಗಿ ವಾಚ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ದೇವು, ಪ್ಯಾಕ್ಟರಿಗೆ ತೆರಳುವ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನಂತರದಲ್ಲಿ ಪೊಲೀಸರು ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.


ಸಂಬಂಧಿತ ಟ್ಯಾಗ್ಗಳು

K.S.R.T.C Bike ಸಂಚಾರ ಅಸ್ತವ್ಯಸ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ