ಜೆಡಿಎಸ್ ಕಾರ್ಯಕರ್ತನ ಮೇಲೆ ಬಿಜೆಪಿಯವರಿಂದ ಹಲ್ಲೆ!

Assault on Jds worker by Bjp people at tumkur

05-07-2018

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಾಜಕೀಯ ವೈಷಮ್ಯ ಮುಂದುವರೆದಿದೆ. ಬಿಜೆಪಿ ಬೆಂಬಲಿಗರಿಂದ ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿರುವುದುದು ಬೆಳಕಿಗೆ ಬಂದಿದೆ. ಜಿಲ್ಲೆಯ ಹೊರವಲಯದ ಸಿದ್ದಗಿರಿನಗರದಲ್ಲಿ ಜೆಡಿಎಸ್ ಕಾರ್ಯಕರ್ತ ಉಮೇಶ್ ಎಂಬುವರ ಮೇಲೆ ಲಾಂಗ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂದು ತಿಳಿದು ಬಂದಿದೆ. ಸ್ಥಳೀಯ ಬಿಜೆಪಿ ಮುಖಂಡ ನರಸಿಂಹಮೂರ್ತಿ ಬೆಂಬಲಿಗನಾದ ಪ್ರದೀಪ್ ಮತ್ತು ಆತನ ಸಹಚರರು ಈ ಕೃತ್ಯ ಎಸಗಿದ್ದಾರೆ. ಆದರೆ, ಘಟನೆಗೆ ನರಸಿಂಹಮೂರ್ತಿ ಕುಮಕ್ಕಿನಿಂದಲೇ ನೆಡೆದಿದೆ ಎಂಬ ಆರೋಪವೂ ಕೇಳಿ ಬಂದಿದೆ. ಗಾಯಾಳು ಉಮೇಶ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Local leader Police ಚಿಕಿತ್ಸೆ ವೈಷಮ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ