ಯೋಧನ ತಂದೆ ಮೇಲೆ ಹಲ್ಲೆ: ಇಬ್ಬರ ಬಂಧನ

Attack on a soldier

05-07-2018

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಯೋಧ ಮಂಜುನಾಥ್ ಅವರ ತಂದೆ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸತೀಶ (30) ದುಶ್ಯಂತ(30) ಬಂಧಿತ ಆರೋಪಿಗಳು. ಆರೋಪಿಗಳ ವಿರುದ್ಧ 379,337,304,323 ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಪಿರಿಯಾಪಟ್ಟಣ ಠಾಣೆ ಪೊಲೀಸರು. ಪಿರಿಯಾಪಟ್ಟಣ ಮುತ್ತೂರು ಗ್ರಾಮದ ಯೋಧ ಮಂಜುನಾಥ್ ಅವರ ತಂದೆ ರಾಜಣ್ಣ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬೈಕ್ ಬಂದ ಈ ಇಬ್ಬರು ಅಪಘಾತ ಮಾಡಿದ್ದೂ ಅಲ್ಲದೆ, ರಾಜಣ್ಣ ಅವರ ಮೇಲೆ ಹಲ್ಲೆ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿದ್ದರೂ ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಸಾಮಾಜಿಕ ಜಾಲತಾಣದಲ್ಲಿ ಅಳಲು ತೊಡಿಕೊಂಡಿದ್ದರು. ಯೋಧ ಮಂಜುನಾಥ್ ಅವರ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Soldier Social media ವೈರಲ್ ಯೋಧ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ