ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆ

New scheme for pregnant womens

05-07-2018

ಬೆಂಗಳೂರು: ಬಜೆಟ್ ನಲ್ಲಿ ಬಡತನ ರೇಖೆಗಿಂತ ಕೆಳಗಿರುವ ಗರ್ಭಿಣಿ ಮಹಿಳೆಯರಿಗೆ ರಾಜ್ಯ ಸರ್ಕಾರದ ಮಾತೃಪೂರ್ಣ ಮತ್ತು ಕೇಂದ್ರ ಸರ್ಕಾರದ ಮಾತೃವಂದನಾ ಕಾರ್ಯಕ್ರಮಗಳಲ್ಲಿ ಹಲವು ಸೌಲಭ್ಯಗಳು ದೊರೆಯುತ್ತಿದ್ದು, ಇವುಗಳೊಂದಿಗೆ ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯನ್ನು ನಾವು ಹೊಸದಾಗಿ ರೂಪಿಸಿದ್ದು ಇದರಡಿ ಹೆರಿಗೆ ಪೂರ್ವದ ಮೂರು ತಿಂಗಳು ಮತ್ತು ಹೆರಿಗೆ ನಂತರದ ಮೂರು ತಿಂಗಳು ತಲಾ ಒಂದು ಸಾವಿರ ರೂ ಹಣ ನೀಡಲಾಗುವುದು ಎಂದು ಕುಮಾರತ ಸ್ವಾಮಿ ತಿಳಿಸಿದ್ದಾರೆ.

ಈ ಯೋಜನೆ ತಾಯಿಯ ಎರಡು ಮಕ್ಕಳಿಗೆ ಅನ್ವಯವಾಗಲಿದೆ ಎಂದ ಅವರು, ನವೆಂಬರ್ ಒಂದರಿಂದ ಜಾರಿಯಾಗಲಿರುವ ಈ ಯೋಜನೆಗೆ ಮುನ್ನೂರೈವತ್ತು ಕೋಟಿ ರೂ. ನೀಡಲಾಗುವುದು ಎಂದು ವಿವರಿಸಿದರು.

ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯಡಿ ಬಡಕುಟುಂಬಗಳ ಹೆಣ್ಣು ಮಕ್ಕಳಿಗೆ ತಲಾ ಆರು ಸಾವಿರ ರೂ ಭತ್ಯೆ ನೀಡುವುದು, ವೃದ್ದಾಪ್ಯ ವೇತನದ ಪ್ರಮಾಣವನ್ನು 600 ರೂಗಳಿಂದ ಒಂದು ಸಾವಿರ ರೂಗಳಿಗೆ ಹೆಚ್ಚಳ ಮಾಡುವುದು, ಶೂನ್ಯ ಬಡ್ಡಿ ದರದಲ್ಲಿ ಒದಗಿಸುತ್ತಿದ್ದ ಮೂರು ಲಕ್ಷ ರೂಗಳವರೆಗಿನ ಕೃಷಿ ಸಾಲವನ್ನು ಐದು ಲಕ್ಷ ರೂಗಳಿಗೇರಿಸುವುದೂ ಸೇರಿದಂತೆ ಹಲವು ಬಂಪರ್ ಕೊಡುಗೆಗಳನ್ನು ಕುಮಾರಸ್ವಾಮಿ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ.

ಈ ಹಿಂದೆ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಮಂಡಿಸಿದ ಬಜೆಟ್‍ನಲ್ಲಿರುವ ಎಲ್ಲ ಯೋಜನೆಗಳನ್ನು ಮುಂದುವರಿಸುವುದಾಗಿ ಪ್ರಕಟಿಸಿರುವ ಕುಮಾರಸ್ವಾಮಿ, ಅದರೊಂದಿಗೆ ಇನ್ನಷ್ಟು ಹೊಸ ಯೋಜನೆಗಳನ್ನು ಪ್ರಕಟಿಸಿ ಈ ಸರ್ಕಾರ ತಾಯಿ ಹೃದಯದೊಂದಿಗೆ ಮುಂದೆ ಸಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

budget Pregnancy ಮಾತೃಶ್ರೀ ಯೋಜನೆ ಮಾತೃಪೂರ್ಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ