ಬಜೆಟ್ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆ

BJP MLAs protest against budget at vidhana soudha

06-07-2018

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಚೊಚ್ಚಲ ಬಜೆಟ್ ನಲ್ಲಿ ಕರಾವಳಿ ಭಾಗ ಮತ್ತು ಮಲೆನಾಡ ಭಾಗದ ಕೆಲ ಜಿಲ್ಲೆಗಳ ಕಡೆಗಣನೆ ಮಾಡಿದ್ದಾರೆಂದು ಆರೋಪಿಸಿ ವಿಧಾನಸೌಧದ ಆವರಣದಲ್ಲಿ ಒಂದೆಡೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರು ಪ್ರತಿಭಟಿಸಿದ್ದರೆ, ಮತ್ತೊಂದೆಡೆ ಕರಾವಳಿ ಭಾಗದ ಬಿಜೆಪಿ ಶಾಸಕರು ಧರಣಿ ಕುಳಿತರು.

ಬಜೆಟ್ ನಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಇಂದು ‌ಮೂರೂ‌ ಜಿಲ್ಲೆಗಳ ಬಿಜೆಪಿ ಶಾಸಕರು ವಿಧಾನಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಇನ್ನು ಕರಾವಳಿ ಭಾಗದ ಬಿಜೆಪಿ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರದ ಬಜೆಟ್ ವಿರುದ್ಧ, ಸಿಎಂ ಕುಮಾರಸ್ವಾಮಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪ್ರತಿಭಟನೆಯಲ್ಲಿ ಪರಿಷತ್ ನ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಸುನೀಲ್ ಕುಮಾರ್, ಹರೀಶ್ ಪೂಂಜಾ, ರಘುಪತಿ ಭಟ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ