‘ಬಿಜೆಪಿಯವರು ಅಧಿವೇಶನದಲ್ಲಿ ಪ್ರಶ್ನಿಸಿಲಿ, ಉತ್ತರಿಸಲು ಸಿದ್ಧ’

H.D.Kumaraswamy Reaction about BJP protest at vidhana soudha

06-07-2018

ಬೆಂಗಳೂರು: ‘ಕಳೆದ ಬಾರಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗಕ್ಕೆ ಕೊಡುಗೆ ನೀಡಲಾಗಿದೆ. ನಿನ್ನೆ ಮಂಡಿಸಿದ ಬಜೆಟ್ ಪರಿಷ್ಕೃತ ಬಜೆಟ್ ಆಗಿದೆ’ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಜೆಟ್ ನಲ್ಲಿ ಕರಾವಳಿ ಹಾಗು ಮಲೆನಾಡ ಕೆಲವು ಜಿಲ್ಲೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಬಿಜೆಪಿಯ ಆಯಾ ಭಾಗದ ಶಾಸಕರು ವಿಧಾನಸೌಧ ಆವರಣದಲ್ಲಿ ಪ್ರತಿಭಟಿಸುತ್ತಿರುವುದಕ್ಕೆ ಈ ರೀತಿಯಾಗಿ ಉತ್ತರಿಸಿದ್ದಾರೆ.

'ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೂ ನಿನ್ನೆಯ ಬಜೆಟ್ ನಲ್ಲಿ ಪ್ರಾಧಿನಿತ್ಯ ನೀಡಲಾಗಿದೆ, ಹಾಸನ, ರಾಮನಗರ, ಹೊಳೆನರಸೀಪುರಕ್ಕೆ ಮಾತ್ರ ಬಜೆಟ್ ಸೀಮಿತವಾಗಿದೆ ಎಂದು ಆರೋಪಿಸುವ ಬಿಜೆಪಿಯವರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಲಿ, ನಾನು ಉತ್ತರ ಕೊಡಲು ಸಿದ್ಧನಿದ್ದೇನೆ' ಎಂದರು.

'ಸಿದ್ದರಾಮಯ್ಯನವರ ಬಜೆಟ್ ನ ಮುಂದುವರೆದ ಭಾಗ ಇದು. ಸಿದ್ದರಾಮಯ್ಯನವರ ಬಜೆಟ್ ನಲ್ಲಿ ಮೀನುಗಾರರ ಸಮಸ್ಯೆಗೆ 150 ಕೋಟಿ ಹಣ ಮೀಸಲಿಟ್ಟಿದ್ದರು, ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಕ್ಲಸ್ಟರ್ ನಿರ್ಮಾಣಕ್ಕೆ ಹಣ ಮೀಸಲಿಡಲಾಗಿದೆ. ಸಮಗ್ರ ಕರ್ನಾಟಕ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿರೋ ಬಜೆಟ್ ಇದು, ಮೂರ್ನಾಲ್ಕು ಜಿಲ್ಲೆಗಳಿಗೆ ಸೀಮಿತವಾದ ಬಜೆಟ್ ಅಲ್ಲ ಇದು'. ‘ಅರ್ಥವಾಗದವರಿಗೆ ಏನ್ ಹೇಳೋದಕ್ಕೆ ಆಗುತ್ತೆ ಹೇಳಿ’ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು ಸಿಎಂ.

ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 32ನೇ ಪುಣ್ಯ ಸ್ಮರಣೆ ಹಿನ್ನೆಲೆ, ವಿಧಾನಸೌಧದ ಕೆಂಗಲ್ ಗೇಟ್ ಬಳಿ ಬಾಬು ಜಗಜೀವನರಾಂ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಸಿಎಂ ಕುಮಾರಸ್ವಾಮಿ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು, ಈ ವೇಳೆ, ಸಚಿವ ಪ್ರಿಯಾಂಕ ಖರ್ಗೆ ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ