ತನ್ನ ಹೊಲದಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Farmer committed suicide by hanging himself on his farm

06-07-2018

ಬಾಗಲಕೋಟೆ: ನಿನ್ನೆಯಷ್ಟೆ ರಾಜ್ಯ ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡಿದ್ದು, ಇದರ ಬೆನ್ನಲ್ಲೇ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವುದು ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ನಡೆದಿದೆ. ತಮ್ಮ ಹೊಲದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಂಡಪ್ಪ ಅಂಬಿ (50) ಮೃತ ರೈತ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 1ಲಕ್ಷ, ಸಿಂಡಿಕೇಟ್ ಬ್ಯಾಂಕ್ ನಲ್ಲಿ ಒಂದು ಲಕ್ಷ ಸೇರಿದಂತೆ ಇತರೆ ಬ್ಯಾಂಕ್, ಕೈಸಾಲ ಸೇರಿ ಒಟ್ಟು ಐದು ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಅದಲ್ಲದೆ ತಮ್ಮ ಒಂದು ಎಕರೆ 37 ಗುಂಟೆ ಹೊಲದಲ್ಲಿ ಕಬ್ಬು ಬೆಳೆದಿದ್ದು, ಬೆಳೆಯೂ ಸರಿಯಾಗಿ ಬೆಳೆದಿರಲಿಲ್ಲ. ಇದರಿಂದ ಮನನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಜಮಖಂಡಿ ತಹಶೀಲ್ದಾರ, ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Farmer Suicide ಸಾಲಮನ್ನಾ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ