ವಿರೋಧ ಪಕ್ಷಕ್ಕೆ ಸವಾಲು ಹಾಕಿದ್ದಾರೆ ಸಿಎಂ

CM Kumaraswamy challanged opposition party

06-07-2018

ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ ಎಂದು ಬಿಜೆಪಿ ಆರೋಪಿಸುತ್ತಿರುವ ಹಿನ್ನೆಲೆ, ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ‘ಈ ವಿಚಾರವಾಗಿ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ’ ಎಂದರು. ಇನ್ನು ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಕೆ.ಪಾಟೀಲ್ ಅವರು ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು ‘ತನಗೆ ಯಾವುದೇ ಪತ್ರ ತಲುಪಿಲ್ಲ' ಎಂದು ಉತ್ತರಿಸಿದ್ದಾರೆ.

ಬಜೆಟ್ ರಾಮನಗರ, ಮಂಡ್ಯ, ಹಾಸನಕ್ಕೆ ಸೀಮಿತ ಅಲ್ಲ, ಈ ಬಜೆಟ್ ನಲ್ಲಿ ಸರಿಸುಮಾರು 200ಕೋಟಿ ಕೊಟ್ಟಿರಬಹುದು ಅಷ್ಟೆ. ಈ ವಿಚಾರದ ಕುರಿತು ಸದನದಲ್ಲಿ ಚರ್ಚೆಗೆ ಬರಲಿ ‘ನಾನು ಚರ್ಚೆಗೆ ಸಿದ್ಧ' ಎಂದು ವಿರೋಧ ಪಕ್ಷಕ್ಕೆ ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.


ಸಂಬಂಧಿತ ಟ್ಯಾಗ್ಗಳು

H.D.Kumaraswamy Budget ಸವಾಲು ಹೆಚ್.ಕೆ.ಪಾಟೀಲ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ