ಮತ್ತೆ ಜೋರಾಯ್ತು ಮಳೆಯ ಅಬ್ಬರ

again heavy rain in chikmagalur

07-07-2018

ಚಿಕ್ಕಮಗಳೂರು: ಮಲೆನಾಡಿನಾದ್ಯಂತ ಕೊಂಚ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಿದ್ದಾನೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮೂಡಿಗೆರೆ, ಚಾರ್ಮಾಡಿ, ಕಳಸ, ಕುದುರೆಮುಖ, ಶೃಂಗೇರಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಭಾಗದ ತುಂಗಾ, ಭದ್ರಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದ ನದಿ ಪಾತ್ರದ ಜನರಲ್ಲಿ  ಆತಂಕ ಮೂಡಿದೆ. ತುಂಗಾ, ಭದ್ರಾ,ಹೇಮಾವತಿ ನದಿಗಳ ಒಳಹರಿವು ಹೆಚ್ಚಳವಾಗಿದೆ.

ಮಳೆಯಿಂದಾಗಿ ಜಮೀನುಗಳಿಗೆ ನದಿ ನೀರು ನುಗ್ಗಿ ಬೆಳೆ ನಾಶವಾಗಿದೆ, ಹಲವೆಡೆ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೊರನಾಡು ಸಮೀಪದ ಹೆಬ್ಬಾಳೆ ಸೇತುವೆ ಮುಳುಗಡೆಯಾಗು ಸಾಧ್ಯತೆ ಇದೆ. ಒಂದು ವೇಳೆ ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಕಳಸ-ಹೊರನಾಡು ರಸ್ತೆ ಸಂಪರ್ಕ ಬಂದ್ ಆಗಲಿದೆ.


ಸಂಬಂಧಿತ ಟ್ಯಾಗ್ಗಳು

Bridge Rain ತುಂಗಾ, ಭದ್ರಾ ಹೇಮಾವತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ