ಲಂಚಕ್ಕೆ ಬೇಡಿಕೆ: ಪಂಚಾಯತಿ ಅಧ್ಯಕ್ಷೆ ಎಸಿಬಿ ಬಲೆಗೆ

ACB detained gram panchayat chairman for demanded for Bribeained

07-07-2018

ಮಡಿಕೇರಿ: ಸರ್ಕಾರದ ಯೋಜನೆಯಡಿ ಮನೆ ಮಂಜೂರು ಮಾಡಲು ಫಲಾನುಭವಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಂಚಾಯತಿ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬ್ಯಾಡಗೊಟ್ಟ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಅಹಮದ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.  

ಬ್ಯಾಡಗೊಟ್ಟ ಗ್ರಾಮದಲ್ಲಿ ಸರ್ಕಾರಿ ಯೋಜನೆಯಡಿ ಮನೆ ಮಂಜೂರು ಮಾಡಲು ಫಲಾನುಭವಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಪ್ರತಿ ಫಲಾನುಭವಿಗಳಿಂದ ತಲಾ 15 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ್ದರು ಎನ್ನಲಾದ ದೂರನ್ನು ಆಧರಿಸಿ ಕೊಡಗು ಎಸಿಬಿ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

 

 


ಸಂಬಂಧಿತ ಟ್ಯಾಗ್ಗಳು

ACB bribe ವಿಚಾರಣೆ ಸರ್ಕಾರಿ ಯೋಜನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ