ಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್ ಎಂಎಲ್ಸಿಗಳ ಮನವಿ

Congress MLAs appealing for the minister post

07-07-2018

ಬೆಂಗಳೂರು: ವಿಧಾನ ಪರಿಷತ್ತಿನ ಸದಸ್ಯರಿಗೆ ಮಂತ್ರಿ ಸ್ಥಾನ ನೀಡುವಂತೆ ಹಾಗೂ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಳ್ಳುವಂತೆ ಕೋರಿ ಕಾಂಗ್ರೆಸ್ 24 ಎಂಎಲ್ಸಿಗಳು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ವಿಧಾನಪರಿಷತ್ ಸದಸ್ಯರಾದ ಎಸ್.ಆರ್ ಪಾಟೀಲ್, ವಿ.ಎಸ್.ಉಗ್ರಪ್ಪ, ಹೆಚ್.ಎಂ.ರೇವಣ್ಣ,  ವಿಜಯ್ ಸಿಂಗ್, ಆರ್.ಬಿ.ತಿಮ್ಮಾಪುರ, ಧರ್ಮಸೇನಾ ಸೇರಿ 24ಮಂದಿ ಸಹಿ ಹಾಕಿ ಪತ್ರವನ್ನ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಇಮೇಲ್ ಮೂಲಕ ರವಾನೆ ಮಾಡಿದ್ದಾರೆ.

ವಿಧಾನಪರಿಷತ್ ಸದಸ್ಯರುಗಳಿಗೆ ಮಂತ್ರಿ ಸ್ಥಾನ ನೀಡಬೇಕು ಹಾಗೂ ಸಭಾಪತಿ ಸ್ಥಾನ ಕಾಂಗ್ರೆಸ್ ಉಳಿಸಿಕೊಳ್ಳಬೇಕು. ಈ ಬಗ್ಗೆ ಚರ್ಚಿಸಲು ಭೇಟಿ ಮಾಡಲು ಅವಕಾಶ ನೀಡಿ ಎಂದು ಎಂಎಲ್ಸಿಗಳು ಪತ್ರದಲ್ಲಿ ತಿಳಿಸಿದ್ದಾರೆ. ಹಾಗೆಯೇ ರಾಜ್ಯಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಸಿದ್ದರಾಮಯ್ಯಗೂ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಕೊಡಿಸುವಂತೆ ಮನವಿ ಮಾಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

MLC AICC ವಿಧಾನಪರಿಷತ್ ಅವಕಾಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ