ಲೋಕಸಭಾ ಚುನಾವಣೆಗೆ ಸಿದ್ಧರಾಗಿ: ಪರಮೇಶ್ವರ್

Be Ready for Lok Sabha elections: Parameshwar

09-07-2018

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಾಗುವಂತೆ ಶಾಸಕರ ಭವನದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಸಂಬಂಧ ಇಂದು ಶಾಸಕರಭವನದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡ ಮಾಜಿ ಕಾಂಗ್ರೆಸ್‌ ಶಾಸಕರೊಂದಿಗೆ ಸಭೆ ನಡೆದಿದ್ದು, ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೋಲು ಕಂಡ ಶಾಸಕರಿಗೆ ಧೈರ್ಯ ತುಂಬಿ ರಾಜಕೀಯ ಬೆಳವಣಿಗೆಯಿಂದಾಗಿ ಗೆಲ್ಲುವ ಶಾಸಕರು ಸಹ ಕಡಿಮೆ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಹಾಗೆಂದು ನಿರಾಶಾ ಭಾವ ತಳೆಯಬೇಡಿ. ಪಕ್ಷ‌ ಹಾಗೂ ಕಾರ್ಯಕರ್ತರು ಸದಾ ನಿಮ್ಮೊಂದಿಗಿದ್ದಾರೆ ಎಂದು ಆತ್ಮವಿಶ್ವಾಸ ತುಂಬಿದರು.

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ‌ ನೇತೃತ್ವದಲ್ಲಿ‌ ಈ ಬಾರಿ ಲೋಕಸಭಾ ಚುನಾವಣೆ ಎದುರಿಸಲಿದ್ದೇವೆ. ಹೀಗಾಗಿ, ಪ್ರತಿಯೊಬ್ಬರು ತಮ್ಮ ಕ್ಷೇತ್ರದಲ್ಲಿ ಹೆಚ್ಚು ಸಕ್ರಿಯವಾಗಿ ಕೆಲಸ ಮಾಡುವಂತೆ ಸೂಚಿಸಿದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಸಧೃಡಗೊಂಡು, ವಿಧಾನಸಭಾ ಚುನಾವಣೆಯಲ್ಲಿ ಆದ ಅಷ್ಟೂ ನಷ್ಟವನ್ನು ತುಂಬಬೇಕಿದೆ. ಈ ನಿಟ್ಟಿನಲ್ಲಿ‌ ಎಲ್ಲರೂ ಸಕ್ರಿಯರಾಗುವಂತೆ ಸಲಹೆ‌ ನೀಡಿದರು.

ಸಭೆಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ‌ ನಿಯೋಜಿತ ಅಧ್ಯಕ್ಷ ದಿನೇಶ್ ಗುಂಡೂರಾವ್, ನಿಯೋಜಿತ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉಪಸ್ಥಿತರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ