ಮಾವು ಬೆಳೆಗೆ ಬೆಂಬಲ ಬೆಲೆಗೆ ಚಿಂತನೆ: ಸಿಎಂ

CM kumaraswamy reaction about mango Mango grower and heavy loss

09-07-2018

ಬೆಂಗಳೂರು: ಮಾವು ಬೆಳೆಗಾರರ ಸಮಸ್ಯೆ ಬಗೆಹರಿಸಲು ಮುಂದಾಗಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನೆರೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ನೆರೆ ರಾಜ್ಯದಲ್ಲಿ ಕಾಣಿಸಿಕೊಂಡ ನಿಫಾ ವೈರಸ್‌ ಆತಂಕದಿಂದ ಮಾವಿಗೆ ಬೇಡಿಕೆ ಕುಸಿದು ರೈತರು ಸಂಕಟಕ್ಕೆ ಸಿಲುಕಿದ್ದು, ರೈತರು ಬೆಳೆದ ಟನ್‌ಗಟ್ಟಲೆ ಮಾವು‌ ಕೊಳ್ಳುವವರಿಲ್ಲದೆ ಆತಂಕದಲ್ಲಿದ್ದಾರೆ.

ಮಾವು ಬೆಳೆಗಾರರ ಸಮಸ್ಯೆಯನ್ನು ಮನಗಂಡಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾವಿಗೆ ಬೆಂಬಲ ಬೆಲೆ ನೀಡುವ ಕುರಿತು ಚಿಂತನೆ ನಡೆಸಿದ್ದಾರೆ. ಮಾವು ಬೆಳೆಯನ್ನು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ರವಾನಿಸಲು ಆಯಾ ರಾಜ್ಯದ ಮುಖ್ಯಮಂತ್ರಿಗಳೊಡನೆ ಚರ್ಚೆ ನಡೆಸಿದ್ದಾರೆ. ಮಾವು ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಮಾವು ಬೆಳೆಗಾರರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ