ಸಿಡಿಲು ಬಡಿದು ದೇವಾಲಯದ ಗೋಪುರಕ್ಕೆ ಹಾನಿ !

Kannada News

29-05-2017

ಹಾಸನ:- ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ  ಧಾರ್ಮಿಕ ಕೇಂದ್ರ ಹಾಗೂ ಪ್ರೇಕ್ಷಣೀಯ ಸ್ಥಳವಾದ ಮಾವಿನಕೆರೆ ಬೆಟ್ಟದ ಮೇಲಿನ ಶ್ರೀರಂಗನಾಥಸ್ವಾಮಿ ದೇವಾಲಯದ ಗೋಪುರಕ್ಕೆ ಸಿಡಿಲು ಬಡಿದು ಅಲ್ಪ ಪ್ರಮಾಣದ ಹಾನಿಯಾಗಿದೆ. ಶನಿವಾರ ಬೆಳಗಿನ ಜಾವ ಸುರಿದ ಮಳೆಗೆ ಗೋಪುರದ ಕಳಸ ಭಾಗಕ್ಕೆ ಸಿಡಿಲು ಬಡಿದಿದ್ದು, ರಾಜಗೋಪುರದ ಮೇಲಿನ ಸಿಮೆಂಟ್ ಗ್ರಹಗಳು ಸ್ವಲ್ಪ ಮಟ್ಟಿಗೆ ಹಾನಿಯಾಗಿದೆ. ಸಿಡಿಲು ಬಡಿದ ವಿಷಯ ಭಕ್ತರಲ್ಲಿ ಆತಂಕ ಮೂಡಿಸಿದ್ದು, ಕಂದಾಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಜುರಾಯಿ ಇಲಾಖೆಗೆ ಒಳಪಡುವ ದೇವಾಲಯವಾದ್ದರಿಂದ ದುರಸ್ಥಿ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಹಸೀಲ್ದಾರ್ ರೇಣುಕುಮಾರ್ ತಿಳಿಸಿದ್ದಾರೆ. ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯ ಈ ಭಾಗದ ಪ್ರಸಿದ್ದ ದೇವಾಲಯವಾಗಿದ್ದು, ಭಕ್ತರು ದೇಶದಾದ್ಯಂತ ನೆಲೆಸಿದ್ದಾರೆ. ವರ್ಷಕ್ಕೊಮ್ಮೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ದೇಶದ ಮೂಲೆಮೂಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟುಂಬ ವರ್ಗ ಈ ದೇವಾಲಯದಲ್ಲಿ ಹೆಚ್ಚಿನ ಪೂಜಾ ಕೈಂಕರ್ಯ ಕೈಗೊಳ್ಳುತ್ತದೆ ಎನ್ನುವುದು ವಿಶೇಷ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ