ಇಂಧನ ಇಲಾಖೆ: ಗುತ್ತಿಗೆ ಕಾರ್ಮಿಕರ ಬೃಹತ್ ಪ್ರತಿಭಟನೆ

Massive protest by contract workers of ministry of power and energy

09-07-2018

ಬೆಂಗಳೂರು: ಇಂಧನ ಇಲಾಖೆಯಲ್ಲಿನ ಎಲ್ಲಾ ವಿಭಾಗದ ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಎಂದು ಆಗ್ರಹಿಸಿ ನಗರದಲ್ಲಿ ಗುತ್ತಿಗೆ ಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಸೇರಿದ ಸಾವಿರಾರು ಮಂದಿ ಕಾರ್ಮಿಕರು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಫೆಡರೇಷನ್ ಅಧ್ಯಕ್ಷ ಜೆ.ಸತ್ಯಬಾಬು ಬಳ್ಳಾರಿ ಸುಪ್ರೀಂ ಕೋರ್ಟ್ ನ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನವಾಗಿ 21 ಸಾವಿರ ರೂ.ಗಳನ್ನು ನೀಡಬೇಕು. ನೇರ ನೇಮಕದಲ್ಲಿ ಸೇವಾ ಹಿರಿತನದ ಆಧಾರದಲ್ಲಿ ಗುತ್ತಿಗೆ ಕಾರ್ಮಿಕರನ್ನು ಖಾಯಂ ಮಾಡಬೇಕು ಆಗ್ರಹಿಸಿದರು.

ತಮಿಳುನಾಡು, ಆಂಧ್ರ ಸರ್ಕಾರಗಳು ಗುತ್ತಿಗೆ ನೌಕರರನ್ನು ಖಾಯಂ ಮಾಡಿದಂತೆ ಕರ್ನಾಟಕದಲ್ಲೂ ಮಾಡಬೇಕು. ಈಗಾಗಲೇ ಕರೆದಿರುವ ನೇರ ನೇಮಕವನ್ನು ರದ್ದು ಮಾಡಬೇಕು. ವಿದ್ಯುತ್ ಅಪಘಾತದಿಂದ ಸಾವಿಗೀಡಾದ ಮತ್ತು ಅಂಗವಿಕಲರಾದ ಕಾರ್ಮಿಕರ ಸಂಪೂರ್ಣ ಜವಾಬ್ದಾರಿಯನ್ನು ಇಂಧನ ಇಲಾಖೆಯೇ ನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಈ ಸಾಲಿನಲ್ಲಿ ಆದ 1,501ಕ್ಕೂ ಅಧಿಕ ವಿದ್ಯುತ್ ಅಪಘಾತಗಳಲ್ಲಿ ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಸೂಕ್ತ ರೀತಿಯಲ್ಲಿ ಸೌಲಭ್ಯ ಹಾಗೂ ಪರಿಹಾರ ನೀಡಲಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರುವ ಮುನ್ನಾ, ವಿದ್ಯುತ್ ಇಲಾಖೆಯ ಗುತ್ತಿಗೆದಾರರನ್ನು ಖಾಯಂಗೊಳಿಸಲಾಗುವುದು ಎಂದು ಆಶ್ವಾಸನೆ ಘೋಷಿಸಿದ್ದರು.ಅದರಂತೆ, ರಾಜ್ಯ ಸರ್ಕಾರವೂ, ಕೆಪಿಟಿಸಿಎಲ್, ಕೆಪಿಸಿಎಲ್, ಚೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಹಾಗೂ ಬೆಸ್ಕಾಂಗಳಡಿಯಲ್ಲಿ ದುಡಿಯುತ್ತೀರುವ ಎಲ್ಲಾ ಕಾರ್ಮಿಕರನ್ನು ಈ ಕೂಡಲೇ ಖಾಯಂ ಗೊಳಿಸಬೇಂದು ಆಗ್ರಹಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ