'ಕೈ' ಶಾಸಕನ ಬೆಂಬಲಿಗರಿಂದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ!

congress MLA followers vs local leader

09-07-2018

ಬೆಂಗಳೂರು: ಬಾಗಲಗುಂಟೆಯಲ್ಲಿ ನಿನ್ನೆ ರಾತ್ರಿ ರಾಜಕೀಯ ವೈಷಮ್ಯದಿಂದ ಶಾಸಕನ ಬೆಂಬಲಿಗರು ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ನಗರದ ಬಾಗಲಗುಂಟೆ ವಾರ್ಡ್14ರ ಕಾಂಗ್ರೆಸ್ ವಾರ್ಡ್‍ನ ಅಧ್ಯಕ್ಷ ಜಗದೀಶ್ ಎಂಬುವರ ಮೇಲೆ ದಾಸರಹಳ್ಳಿ ಶಾಸಕ ಆರ್.ಮಂಜುನಾಥ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ವಿರುದ್ಧವಾಗಿ ಕೆಲಸ ಮಾಡಿದ ಸಿಟ್ಟಿಗೆ ಮತ್ತು ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ ಎಂದು ಜಗದೀಶ್ ಆರೋಪಿಸಿದ್ದಾರೆ.

ಶಾಸಕರ ಬೆಂಬಲಿಗರಾದ ರಮೇಶ್ ಅಲಿಯಾಸ್ ಕಿಚ್ಚ, ನಾಗೇಂದ್ರಸ್ವಾಮಿ ಅಲಿಯಾಸ್ ನಾಗೇಂದ್ರ ಹಾಗೂ ಇತರರು ಜಗದೀಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿ, ಚಪ್ಪಲಿ ಕಾಲಿನಿಂದ ತುಳಿದು ದೌರ್ಜನ್ಯ ನಡೆಸಲಾಗಿದೆ ಎಂದು ಜಗದೀಶ್ ಆರೋಪಿಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಜಗದೀಶ್ ರನ್ನು ಸ್ಥಳೀಯ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

congress JDS ದೌರ್ಜನ್ಯ ವೈಷಮ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ