ವೇತನ ವಿಳಂಬ: ಪೌರಕಾರ್ಮಿಕ ಆತ್ಮಹತ್ಯೆ

Salary Delay: pourakarmika suicided

09-07-2018

ಬೆಂಗಳೂರು: ವೇತನ ನೀಡಲು ವಿಳಂಬ ಮಾಡಿದ್ದರಿಂದ ನೊಂದ ಬಿಬಿಎಂಪಿ ಪೌರಕಾರ್ಮಿಕ ಸುಬ್ರಮಣ್ಯ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಮಲ್ಲೇಶ್ವರಂನ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.

ಪೈಪ್ ಲೈನ್ ರಸ್ತೆಯ ಸುಬ್ರಮಣ್ಯ(38) ನಿನ್ನೆ ರಾತ್ರಿ ವಿಷ ಸೇವಿಸಿ ಅಸ್ವಸ್ಥರಾಗಿದ್ದರು ತಕ್ಷಣವೇ  ಅವರನ್ನು ಕೂಡಲೇ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 12 ವರ್ಷದಿಂದ ಬಿಬಿಎಂಪಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 6 ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿದ್ದರು ಎನ್ನಲಾಗಿದೆ.

ಇದರಿಂದ ಮನನೊಂದ ಸುಬ್ರಮಣ್ಯ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಬಿಎಂಪಿ ವಿರುದ್ಧ ಮೃತ ಪೌರಕಾರ್ಮಿಕನ ಸಂಬಂಧಿಕರು ಆರೋಪಿಸಿದ್ದಾರೆ. ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


ಸಂಬಂಧಿತ ಟ್ಯಾಗ್ಗಳು

employee suicide ಪೌರಕಾರ್ಮಿಕ ಸಂಬಳ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ