ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಬಿ.ಎ.ಮೊಹಿದೀನ್ ವಿಧಿವಶ

Congress leader, Former minister B.A.Mohideen is no more

10-07-2018

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ ಮೊಹಿದೀನ್(81) ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಅನಾರೋಗ್ಯದ ಕಾರಣ ಹಲವು ತಿಂಗಳುಗಳಿಂದ ಬಳಲುತ್ತಿದ್ದ ಮೊಹಿದೀನ್ ವಾರದ ಹಿಂದಷ್ಟೇ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 70ರ ದಶಕದ ಆರಂಭದಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದ್ದ ಮೊಹಿದೀನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಳಿಕ ಬಂಟ್ವಾಳ ಕ್ಷೇತ್ರದಿಂದ ಸ್ಪರ್ಧಿಸಿ, 1995ರಲ್ಲಿ ಉನ್ನತ ಶಿಕ್ಷಣ ಹಾಗೂ ಸಣ್ಣ ಕೈಗಾರಿಕಾ ಸಚಿವರೂ ಆಗಿದ್ದರು. ಮೊಹಿದೀನ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

B.A.Mohideen Minister ಉನ್ನತ ಶಿಕ್ಷಣ ಸಚಿವ ನಿಧನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ