ಮಾಜಿ ಸಚಿವ ಮೊಹಿದೀನ್ ನಿಧನಕ್ಕೆ ಸಿಎಂ ಸಂತಾಪ

CM kumaraswamy condolence to ex-minister B.A.Mohideen

10-07-2018

ಬೆಂಗಳೂರು: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಬಿ.ಎ.ಮೊಹಿದೀನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರಾಜ ಅರಸು ಅವರ ಒಡನಾಡಿಯಾಗಿದ್ದ ಮೊಹಿದೀನ್ ಅವರು, ನಂತರದ ವರ್ಷಗಳಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದರು. 2016ರಲ್ಲಿ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿದ್ದರು. ಮೊಹಿದೀನ್ ಅವರ ನಿಧನದಿಂದ ನಾಡು ಹಿರಿಯ ಮುತ್ಸದ್ದಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ನೀಡಲಿ ಎಂದರು.

ಇನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಹ ಮೊಹಿದೀನ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಒಬ್ಬ ಉತ್ತಮ ನಾಯಕನನ್ನು ರಾಜ್ಯ ಕಳೆದುಕೊಂಡಿದೆ, ಮೊಹಿದೀನ್ ರವರ ನಿಧನದಿಂದ ವಯಕ್ತಿಕವಾಗಿ ಬಹಳ ನೋವಾಗಿದೆ' ಎಂದು ಹೇಳಿದ್ದಾರೆ.  ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy H.D.Devegowda ಬಿ.ಎ.ಮೊಹಿದೀನ್ ಒಡನಾಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ