ಪೌರ ಕಾರ್ಮಿಕ ಆತ್ಮಹತ್ಯೆ: ಬಿಜೆಪಿ ಪ್ರತಿಭಟನೆ

Pourakarmika Suicide: BJP protest in front of bbmp office

10-07-2018

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಇಂದು ಪೌರ ಕಾರ್ಮಿಕನ ಆತ್ಮ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದರು. ಪೌರಕಾರ್ಮಿಕರಿಗೆ ಸಂಬಳ ನೀಡದೆ ಪೌರಕಾರ್ಮಿಕನ ಆತ್ಮಹತ್ಯೆಗೆ ರಾಜ್ಯ ಸರ್ಕಾರ ಕಾರಣವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಬಿಬಿಎಂಪಿ ವಿರುದ್ಧ ಮಂತ್ರಿ ಮಾಲ್ ಮುಂಭಾಗದಲ್ಲಿರುವ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಬಿಬಿಎಂಪಿಯಲ್ಲಿ ಪಕ್ಷದ ನಾಯಕ ಪದ್ಮನಾಭರೆಡ್ಡಿ, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್.ಸದಾಶಿವ, ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ, ರಾಜ್ಯ ಬಿಜೆಪಿ ಸಹವಕ್ತಾರ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.


ಸಂಬಂಧಿತ ಟ್ಯಾಗ್ಗಳು

BBMP protest ಪೌರಕಾರ್ಮಿಕ ಪ್ರತಿಭಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ