ಲೋಕಸಭೆ ಚುನಾವಣಾ ಪೂರ್ವ ಮೈತ್ರಿಗೆ ಕಾಂಗ್ರೆಸ್ ನಲ್ಲೇ ವಿರೋಧ!

coalition congress with jds for lok sabha election: some of congress leaders opposed!

10-07-2018

ಬೆಂಗಳೂರು: 2019ರ ಲೋಕಸಭಾ ಚುನಾವಣೆ ಕಾವು ಏರತೊಡಗಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುವ ಹಿನ್ನೆಲೆ ತೀವ್ರ ಕುತೂಹಲವನ್ನೂ ಕೆರಳಿಸಿದೆ. ಇನ್ನು ರಾಜ್ಯದಲ್ಲಿ ಚುನಾವಣಾ ಪೂರ್ವ ಮೈತ್ರಿ ವಿಚಾರವಾಗಿ ಕಾಂಗ್ರೆಸ್ ನಲ್ಲೇ ವಿರೋಧ ವ್ಯಕ್ತವಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.

ಕಾಂಗ್ರೆಸ್ ನ ಕೆಲ ಹಿರಿಯ ಮುಖಂಡರು ಜೆಡಿಎಸ್ ಜೊತೆಗೆ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ನ ಮುಖಂಡರಾದ ಕಾಗೋಡು ತಿಮ್ಮಪ್ಪ, ಹೆಚ್.ಕೆ.ಪಾಟೀಲ್, ಸಂಸದ ಚಂದ್ರಪ್ಪ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರದ ಮೈತ್ರಿ ವಿಧಾನಸಭೆಗೆ ಮಾತ್ರ ಸೀಮಿತವಾಗಲಿ. ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್ ಗೆ ರಾಜಕೀಯವಾಗಿ ಭಾರೀ ನಷ್ಟ ಸಂಭವಿಸಲಿದೆ ಅನ್ನೋದು ಹಿರಿಯ ನಾಯಕರ ಲೆಕ್ಕಾಚಾರ. ಮೈತ್ರಿಗೆ ಮುಂದಾದರೆ 8 ರಿಂದ 10 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟು ಕೊಡುವಂತೆ ಜೆಡಿಎಸ್ ಪಟ್ಟು ಹಿಡಿದಿದೆಯಂತೆ.

ಇನ್ನು ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ನಾಯಕರು, ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ನೇರ ಪ್ರತಿಸ್ಪರ್ಧಿ ಕಾಂಗ್ರೆಸ್. ಹೀಗಿರುವಾಗ ಮೈತ್ರಿ ಮಾಡಿಕೊಳ್ಳುವುದರಿಂದ ಬಿಜೆಪಿಗೇನು ನಷ್ಟವಿಲ್ಲ. ಒಂದು ವೇಳೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡರೆ ಕಳೆದ ಬಾರಿ ಗೆದ್ದ 9 ಸ್ಥಾನ ಸಹ ಕಾಂಗ್ರೆಸ್ ಗೆ ಸಿಗಲ್ಲ. ಜೆಡಿಎಸ್ ಎರಡರಿಂದ ಐದಕ್ಕೆ ಜಿಗಿಯುವ ಸಾಧ್ಯತೆ ಇದೆ ಎಂಬುದು ಹಿರಿಯರ ವಾದ.  

ಜೆಡಿಎಸ್ ಸ್ಟ್ರಾಂಗ್ ಆದರೆ ಅದು ಕಾಂಗ್ರೆಸ್ ಗೆ ನೇರ ಹೊಡೆತ. ಹೀಗಾಗಿ ಚುನಾವಣಾ ದೃಷ್ಟಿಯಿಂದ ಹೊಂದಾಣಿಕೆ ಬೇಡ ಅಂತ ಸಿದ್ದರಾಮಯ್ಯ ಗಮನಕ್ಕೆ ತರಲಾಗಿದೆಯಂತೆ. ಅದರೆ ಸರ್ಕಾರದ ಭಾಗವಾಗಿರು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರು ಸಹ ಜೆಡಿಎಸ್ ಜೊತೆ ಹೊಂದಾಣಿಕೆಗೆ ಮುಂದಾಗಿದ್ದಾರಂತೆ. ಹೈಕಮಾಂಡ್ ಮನವೊಲಿಸಿ ಮೈತ್ರಿಗೆ ಬ್ರೇಕ್ ಹಾಕಿ ಪಕ್ಷ ಉಳಿಸಿ ಎಂದು ಹಿರಿಯ ನಾಯಕರು ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಮೂರನೇ ಪಕ್ಷವಾಗುವ ದಿನಗಳು ಬಹಳ ದೂರವಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರಂತೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ