ಅಧಿವೇಶನದ ನಂತರ ಸಿಎಂ ಮಲೆನಾಡ ಪ್ರವಾಸ

after vidhan sabha session cm kumaraswamy to visit malnad rain damaged places

10-07-2018

ಬೆಂಗಳೂರು: ಇತ್ತೀಚೆಗೆ ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಗುತ್ತಿರುವ ಬೆಳೆಹಾನಿ ಹಾಗೂ ಪ್ರಾಣಹಾನಿ ಸೇರಿದಂತೆ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ತುರ್ತಾಗಿ ಸ್ಪಂದಿಸುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಗಿಂದು ತಿಳಿಸಿದರು.

ಶೂನ್ಯ ವೇಳೆಯಲ್ಲಿ ಶಾಸಕ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಧ್ವನಿಗೂಡಿಸಿದ ಮಲೆನಾಡಿನ ಶಾಸಕರುಗಳಿಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿಗಳು ತೀರ್ಥಹಳ್ಳಿಯ ವಿದ್ಯಾರ್ಥಿನಿ ನೀರಲ್ಲಿ ಕೊಚ್ಚಿ ಹೋದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸ್ಥಳಕ್ಕೆ ಹಿರಿಯ ಅಧಿಕಾರಿಗಳನ್ನು ಕಳುಹಿಸಲಾಗಿದೆ.

ವಿದ್ಯಾರ್ಥಿನಿಯ ಕುಟುಂಬಕ್ಕೆ ಶಿಕ್ಷಣ ಇಲಾಖೆಯಿಂದ 1.00 ಲಕ್ಷ ರೂ. ಸಹಾಯಧನ ಘೋಷಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚಿನ ಧನ ಸಹಾಯ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಸ್ಥಳಕ್ಕೆ ಧಾವಿಸಿರುವ ಹಿರಿಯ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಮಳೆಯ ಸಮಯದಲ್ಲಿ ಉಂಟಾಗುವ ಮಲೆನಾಡಿನ ಸಮಸ್ಯೆಗಳಿಗೆ ಸ್ಪಂಧಿಸುವಲ್ಲಿ ಸರ್ಕಾರ ಬದ್ಧವಾಗಿದೆ.  ನಡೆದಾಡುವ ಮೇಲು ಸೇತುವೆಗಳನ್ನು ಗುರುತಿಸಿ ತಕ್ಷಣ ದುರಸ್ಥಿ ಮಾಡಲು ಹಾಗೂ ತಡೆಗೋಡೆ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಅಧಿವೇಶನದ ನಂತರ ಮಲೆನಾಡಿನ ಜಿಲ್ಲೆಗಳ ಪ್ರವಾಸ ಕೈಗೊಂಡು ಸಮಸ್ಯೆಗಳ ಪರಿಹಾರಕ್ಕೆ ತಾವು ಶ್ರಮಿಸುವುದಾಗಿ ಸದನಕ್ಕೆ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ