ಕುಣಿಗಲ್ ನಲ್ಲಿ ಡಬಲ್ ಮರ್ಡರ್ !

Double murder at kunigal!

11-07-2018

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕಾಂತಯ್ಯನಪಾಳ್ಯದಲ್ಲಿ ಡಬಲ್ ಮರ್ಡರ್ ನಡೆದಿದೆ. ಮಾವ ಹಾಗೂ ಸೊಸೆಯನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಈರಣ್ಣ (70), ಸೌಮ್ಯ (25) ಕೊಲೆಯಾದ ದುರ್ದೈವಿಗಳು. ಕಳೆದ ರಾತ್ರಿ ಘಟನೆ ನಡೆದಿದ್ದು, ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ದುಷ್ಕರ್ಮಿಗಳಿಂದ ಸೌಮ್ಯ ಪತಿ ನಾರಾಯಣಸ್ವಾಮಿ ತಪ್ಪಿಸಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ರಕ್ತದ ಮಡುವಿನಲ್ಲೇ ಬಿದ್ದಿದ್ದ ತಾಯಿ ಮತ್ತು ಅಜ್ಜನ ಜೊತೆಯಲ್ಲೇ ಮಗು ರಾತ್ರಿ ಇಡೀ ಕಳೆದಿದೆ. ವಿಷಯ ತಿಳಿಯುತ್ತಿದ್ದಂತೆ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಸವಿದ್ದ ದಂಪತಿ ಒಂದು ತಿಂಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Murder Kunigal ಶಂಕೆ ಗ್ರಾಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ