ದಸರಾ-2018: ಪೂರ್ವಸಿದ್ಧತೆಗಳ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ

Dasara -2018: A meeting led by the CM on pre- preparations

11-07-2018

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ-2018 ಮಹೋತ್ಸವ ಹಿನ್ನೆಲೆ, ಹಬ್ಬ ಆಚರಣೆಯ ಸಿದ್ಧತೆಗಳ ಕುರಿತು ಪೂರ್ವಭಾವಿ ಸಭೆ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿದೆ. ವಿಧಾನಸೌಧದಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಸಚಿವ ಜಿ.ಟಿ.ದೇವೇಗೌಡ, ಸೇರಿದಂತೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ದಸರಾ ಹಬ್ಬದ ಆಚರಣೆಗೆ ಮುಂಜಾಗ್ರತಾ ಕ್ರಮಗಳು, ಮಾಡಿಕೊಳ್ಳಬೇಕಾದ ಸಿದ್ಧತೆ, ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ ದಸರಾ ಮಹೋತ್ಸವದ ಉದ್ಘಾಟನೆಗೆ ಯಾವ ಗಣ್ಯರನ್ನು ಆಹ್ವಾನ ‌ಮಾಡಬೇಕು ಎಂಬುದರ ಬಗ್ಗೆಯೂ ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.


ಸಂಬಂಧಿತ ಟ್ಯಾಗ್ಗಳು

dasara H.D.Kumaraswamy ಮಹೋತ್ಸವ ಆಹ್ವಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ