ಮಕ್ಕಳ ಭಿಕ್ಷಾಟನೆ ವಿರುದ್ಧ ಲೋಕಾಯುಕ್ತ ಸಂಸ್ಥೆ ಸ್ವಯಂ ದೂರು !

Kannada News

29-05-2017

ಬೆಂಗಳೂರು:-ಮಕ್ಕಳ ಭಿಕ್ಷಾಟನೆ ವಿರುದ್ಧ ಲೋಕಾಯುಕ್ತ ಸ್ವಯಂ ದೂರು ದಾಖಲಿಸಿಕೊಂಡಿದೆ. ಬೆಂಗಳೂರಿನ ಟ್ರಾಫಿಕ್ ಸಿಗ್ನಲ್,ಬಸ್ ನಿಲ್ದಾಣ,ರೈಲ್ವೆ ಸ್ಟೇಷನ್ ಸೇರಿದಂತೆ ಜನ ನಿಬಿಡ ಪ್ರದೇಶದಲ್ಲಿ ಮಕ್ಕಳ ಭಿಕ್ಷಾಟನೆ ಹೆಚ್ಚಾಗಿದ್ದು, ಅದೇ ಮಕ್ಕಳು ಕೆಲ ಮಾದಕ ವಸ್ತುಗಳನ್ನು ಸಹ ಮಾರಾಟ ಮಾಡ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು, ಮಕ್ಕಳ ಭಿಕ್ಷಾಟನೆ ಮತ್ತು ಮಕ್ಕಳ ಕಳ್ಳಸಾಗಾಣಿಕೆ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ, ಒಂದು ತಿಂಗಳಲ್ಲಿ ವರದಿ ನೀಡುವಂತೆ ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ,ಡಿಜಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಉನ್ನತ ಅಧಿಕಾರಿಗಳಿಗೆ ನೋಟೀಸ್ ನೀಡಿದೆ. ಮಕ್ಕಳ ಭಿಕ್ಷಾಟನೆಯಲ್ಲಿ ವ್ಯವಸ್ಥಿತ ಜಾಲವಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಲೋಕಾಯುಕ್ತ, ಇದರ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ