ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ

Dinesh Gundu Rao takes over as KPCC president

11-07-2018

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಾಜಿ ಸಚಿವ ದಿನೇಶ್ ಗುಂಡೂರಾವ್ ಇಂದು ಅಧಿಕಾರ ಸ್ವೀಕರಿಸಿದರು.

ಅರಮನೆ ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕಾಗಿ ಅರಮನೆ ಮೈದಾನದ ಸುತ್ತಮುತ್ತ ಭಾರೀ ಪ್ರಮಾಣದ ಫ್ಲೆಕ್ಸ್, ಬ್ಯಾನರ್‍ಗಳನ್ನು ಹಾಕಲಾಗಿತ್ತು.

ಕಳೆದ ಎಂಟು ವರ್ಷಗಳಿಂದ ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಹಾಗೆಯೇ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕರಿಸಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕನಸು ಮನಸಲ್ಲೂ ಅಂದು ಕೊಳ್ಳದ ಜವಾಬ್ದಾರಿಯನ್ನ ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿ ನೀಡಿದ್ದಾರೆ, ಎಂದು ಕೃತಜ್ಞತೆ ಸಲ್ಲಿಸಿದರು. ನಾನು, ರಾಜಕೀಯದಲ್ಲಿ ಬೆಳೆಯಲು ಪರಮೇಶ್ವರ್ ಸಹಾಯ ಮಾಡಿದರು ಎಂದು ಸ್ಮರಿಸಿದರು.

ಕಳೆದ 5 ವರ್ಷಗಳ ಕಾಂಗ್ರೆಸ್ ಪಕ್ಷದ ಸರ್ಕಾರದ ಅಧಿಕಾರವಧಿಯಲ್ಲಿ ಒಳ್ಳೆಯ ಕಾರ್ಯಕ್ರಮಗಳನ್ನು ನೀಡಿದ್ದೆವು. ಜನ ಕಾರ್ಯಕ್ರಮಗಳನ್ನು ನೋಡಿ ಮತ ಹಾಕಿದ್ದರೆ 150 ಕ್ಷೇತ್ರಗಳಲ್ಲಿ ಜಯ ಒಲಿಯುತ್ತಿತ್ತು. ಆದರೆ, ರಾಜಕೀಯ ಅಪಪ್ರಚಾರದಿಂದ ಪರಿಸ್ಥಿತಿ ಬೇರೆ ರೀತಿ ಆಯ್ತು. ಆದಾಯ ತೆರಿಗೆ ದಾಳಿ ಮಾಡಿಸಿ ಬೆದರಿಕೆ ಹಾಕಿಸಿದರು ಎಂದು ಬೇಸರ ವ್ಯಕ್ತಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Dinesh Gundu Rao KPCC ರಾಜಕೀಯ ಬೆದರಿಕೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ