ಬಿಪಿಎಲ್: ಅಕ್ಕಿ ಕಡಿತ ಬೇಡ-ಸಿಎಂಗೆ ಜಮೀರ್ ಪತ್ರ

Zameer Ahmed wrote a letter to cm kumaraswamy

12-07-2018

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ ಪಡಿತರ ಕಾರ್ಡುದಾರರಿಗೆ ನೀಡುತ್ತಿದ್ದ 7ಕೆಜಿ ಅಕ್ಕಿಯಲ್ಲಿ 2ಕೆಜಿ ಕಡಿತ ಮಾಡಿರುವುದನ್ನು ಮರು ಪರಿಶೀಲಿಸಿ ಬಜೆಟ್ ಮೇಲಿನ ಉತ್ತರದ ವೇಳೆ 7 ಕೆಜಿ ಅಕ್ಕಿ ವಿತರಣೆಯ ಮರು ಘೋಷಣೆ ಮಾಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ  ಜಮೀರ್ ಅಹಮದ್ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಚಿವ ಜಮೀರ್ ಅಹಮದ್, ಪಡಿತರ ಕಾರ್ಡುದಾರರಿಗೆ ಈವರೆಗೆ 7ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು. ಆದರೆ, ಈಗ ಬಜೆಟ್ ನಲ್ಲಿ ಅಕ್ಕಿಯ ಪ್ರಮಾಣವನ್ನು 5ಕೆಜಿಗೆ ಇಳಿಕೆ ಮಾಡಲಾಗಿದೆ. ಇದು ಬಡ ಪಡಿತರ ಕಾರ್ಡುದಾರಲ್ಲಿ ಆಕ್ರೋಶ ಸೃಷ್ಟಿಸಿದೆ ಎಂದು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವ ಹೇಳಿಕೆ ಬಜೆಟ್ ನಲ್ಲಿ ನೀಡಿ ಅಕ್ಕಿ ವಿತರಣೆ ಪ್ರಮಾಣದಲ್ಲಿ ಕಡಿತ ಮಾಡಿರುವುದು ಸರಿಯಲ್ಲ. ಹಾಗಾಗಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ 7ಕೆಜೆ ಅಕ್ಕಿ ವಿತರಿಸುವ ಹೇಳಿಕೆ ನೀಡಿ ಸಮ್ಮಿಶ್ರ ಸರ್ಕಾರ ಬಡವರ ಸರ್ಕಾರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಬೇಕು ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Zameer ahmed H.D.Kumaraswamy ಬಜೆಟ್ ಪಡಿತರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ