56ನೇ ವಸಂತಕ್ಕೆ ಕಾಲಿಟ್ಟ ಹ್ಯಾಟ್ರಿಕ್ ಹೀರೋ ಶಿವಣ್ಣ

56th birthday of karunada chakravarthy

12-07-2018

ಬೆಂಗಳೂರು: ಹ್ಯಾಟ್ರಿಕ್ ಹೀರೋ, ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಅವರಿಗೆ ಇಂದು 56ನೇ ಹುಟ್ಟು ಹಬ್ಬದ ಸಂಭ್ರಮ. ರಾಜ್ಯದ ವಿವಿಧೆಡೆ ಶಿವಣ್ಣನ ಅಭಿಮಾನಿಗಳು ವಿವಿಧ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ನಗರದ ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಶಿವಣ್ಣನ ನಿವಾಸಕ್ಕೆ ಅಭಿಮಾನಿಗಳು ತಂಡೋಪತಂಡವಾಗಿ ಆಗಮಿಸಿ ತಮ್ಮ ನೆಚ್ಚಿನ ನಟನಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ನಿನ್ನೆ ತಡರಾತ್ರಿಯಿಂದಲೇ ಅಭಿಮಾನಿಗಳೊಂದಿಗೆ, ಇತರೆ ನಟರೊಂದಿಗೆ ಕೇಕ್ ಕತ್ತರಿಸಿ ಶಿವರಾಜ್ ಕುಮಾರ್ ಅವರು ಸಂಭ್ರಮಿಸಿದ್ದಾರೆ. ಇಂದು ಬೆಳಿಗ್ಗೆಯೂ ಸಹ ಅಭಿಮಾನಿಗಳು ಶಿವಣ್ಣ ಅವರಿಗೆ ಶುಭಾಯಗಳನ್ನು ಕೋರಲು ನಿವಾಸಕ್ಕೆ ಬರುತ್ತಲೇ ಇದ್ದರು.

ಶಿವರಾಜ್ ಕುಮಾರ್ ಹುಟ್ಟು ಹಬ್ಬದ ಹಿನ್ನೆಲೆ, ರಥಾವರ ಬಂಡಿಯಪ್ಪ ನಿರ್ದೇಶನದ 'ವೈರಮುಡಿ' ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಹಾಗೂ ಯೋಗರಾಜ್ ಭಟ ನಿರ್ದೇಶನದ ಚಿತ್ರದ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಅನ್ನದಾನ, ರಕ್ತದಾನ ಹಾಗೂ ಸಿಹಿ ಹಂಚುವ ಕಾರ್ಯಕ್ರಮಗಳು ನಡೆಯಲಿವೆ.


ಸಂಬಂಧಿತ ಟ್ಯಾಗ್ಗಳು

Shiva Rajkumar Birthday ವೈರಮುಡಿ ದಿ ವಿಲನ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ