ಚಿಕ್ಕಮಗಳೂರಲ್ಲಿ ನಿಲ್ಲದ ಮಳೆ, ಶಾಲಾ-ಕಾಲೇಜುಗಳಿಗೆ ರಜೆ

Heavy continuous rain at chikkamagaluru!

12-07-2018

ಚಿಕ್ಕಮಗಳೂರು: ಮಲೆನಾಡಿನಾದ್ಯಂತ ಮಳೆಯ ಅಬ್ಬರ ಮುಂದುವರೆದಿದೆ. ಚಿಕ್ಕಮಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದಲೂ ಮಳೆ ಬಿಟ್ಟೂ ಬಿಡದಂತೆ ಸುರಿಯುತ್ತಲೇ ಇದೆ. ನಿನ್ನೆ ರಾತ್ರಿ ಇಡೀ ಮಲೆನಾಡ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಕಳಸ, ಶೃಂಗೇರಿ, ಕುದುರೆಮುಖ, ಬಾಳೆಹೊನ್ನೂರು, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆಯಲ್ಲೂ  ಭಾರೀ ಮಳೆಯಾಗಿದೆ. ಮಳೆಯ ಅಬ್ಬರದಿಂದ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಭದ್ರಾ ನದಿ. ಪ್ರವಾಹದ ರೀತಿಯಲ್ಲಿ ಹರಿಯುತ್ತಿರುವ ತುಂಗಾ ನದಿ, ಮೈ ದುಂಬಿ ಹರಿಯುತ್ತಿದೆ ಹೇಮಾವತಿ ನದಿ. ಇದರಿಂದ ನದಿ ಪಾತ್ರದ ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಮಲೆನಾಡ ಭಾಗದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಧಾರಾಕಾರ ಮಳೆ ಹಿನ್ನೆಲೆ ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ, ಕೊಪ್ಪ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Malnad Heavy Rain ಜಿಲ್ಲಾಧಿಕಾರಿ ಅಸ್ತವ್ಯಸ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ