ಪೊಲೀಸ್ ಸಿಬ್ಬಂದಿಗೆ 11 ಸಾವಿರ ವಸತಿ ಗೃಹ: ಡಿಸಿಎಂ

11 thousand poice quaters

16-07-2018

ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ 11 ಸಾವಿರ ವಸತಿ ನಿರ್ಮಾಣವಾಗುತ್ತಿದ್ದು, ಈಗಾಗಲೇ 7 ಸಾವಿರ ಮನೆ ನಿರ್ಮಾಣ ಪೂರ್ಣಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಕೊನಪ್ಪನ ಅಗ್ರಹಾರ ಮೆಟ್ರೋಸ್ಟೇಷನ್ ನಿರ್ಮಾಣದ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳುವ ಸಂಬಂಧ ಇದೇ 19ರಂದು ನಡೆಯುವ ಕಾರ್ಯಕ್ರಮಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ವಿಧಾನಸೌಧದಲ್ಲಿಂದು ತಮ್ಮನ್ನು ಭೇಟಿಯಾಗಿ ಆಹ್ವಾನಿಸಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

ಪೊಲೀಸರಿಗೆ ಸೂಕ್ತ ವಸತಿ ಸೌಲಭ್ಯ ನಿರ್ಮಿಸಿಕೊಡುವುದು ಸರ್ಕಾರದ ಜವಾಬ್ಧಾರಿಯಾಗಿದೆ. ಈ ಕಾರ್ಯಕ್ಕೆ ಕಾರ್ಪೋರೇಟ್  ಕಂಪನಿಗಳು ಜೊತೆಯಾದರೆ ಉತ್ತಮ ಸೌಲಭ್ಯ ಒದಗಿಸಿಕೊಡಲು ಸಾಧ್ಯ. ಪೊಲೀಸ್ ಠಾಣೆ ನಿರ್ಮಿಸಿಕೊಡುವಂತೆ ಸುಧಾಮೂರ್ತಿ ಅವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಅವರು ಕೂಡ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಪೊಲೀಸ್ ಸಿಬ್ಬಂದಿಗೆ ವಸತಿ ನಿರ್ಮಿಸಿಕೊಡುವ ಕುರಿತು ಸಹ ಅವರೊಂದಿಗೆ ಚರ್ಚಿಸಲಾಯಿತು ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

G. Parameshwara DCM ಆಹ್ವಾನ ಕಾರ್ಪೋರೇಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ