ಸೆಲ್ಫಿ ಹುಚ್ಚು: ಪ್ರಾಣ ಕಳೆದುಕೊಂಡ ಇಬ್ಬರು ಯುವಕರು

selfie craze: 2 death

16-07-2018

ಬೆಂಗಳೂರು: ಕನಕಪುರದ ಮೇಕೆದಾಟುವಿನಲ್ಲಿ ಸೆಲ್ಫಿ ತೆಗೆಯಲು ಹೋಗಿ ನೀರು ಪಾಲಾಗಿರುವ ನಗರದ ಇಬ್ಬರು ಎಂಜಿನಿಯರ್‍ಗಳ ಮೃತದೇಹಗಳಿಗಾಗಿ ತೀವ್ರ ಶೋಧ ನಡೆಸಲಾಗಿದೆ. ಮೇಕೆದಾಟುವಿನ ಬಳಿ ಕಾಲು ಜಾರಿ ನೀರುಪಾಲಾಗಿರುವ. ಮೂಲತಃ ಬೀದರ್ ಜಿಲ್ಲೆಯವರಾದ ಭವಾನಿ ಶಂಕರ್(29) ಮತ್ತು ಷಮೀರ್ ರೆಹಮಾನ್ (29) ಮೃತ ದೇಹಗಳಿಗೆ ಭಾನುವಾರ ರಾತ್ರಿಯವರೆಗೆ ಹುಡುಕಾಟ ನಡೆಸಿ ಮತ್ತೆ ಇಂದು ಬೆಳಿಗ್ಗೆಯಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆಯಾದರೂ ಇನ್ನೂ ಮೃತದೇಹಗಳು ಪತ್ತೆಯಾಗಿಲ್ಲ.

ಸೋಲದೇವನಹಳ್ಳಿಯ ಖಾಸಗಿ ಕಂಪನಿಯಲ್ಲಿ ಇವರಿಬ್ಬರು ಎಂಜಿನಿಯರ್ ಗಳಾಗಿ ಕೆಲಸ ಮಾಡುತ್ತಿದ್ದ ಇವರಿಬ್ಬರು ಭಾನುವಾರ ನಾಲ್ವರು ಸ್ನೇಹಿತರು ಪ್ರವಾಸಕ್ಕೆಂದು ಕನಕಪುರ ತಾಲೂಕಿನ ಮೇಕೆದಾಟಿಗೆ ತೆರಳಿದ್ದರು.ಮೇಕೆದಾಟಿನಲ್ಲಿನ ಬಂಡೆಯ ಮೇಲೆ ನಿಂತು ಕಾವೇರಿ ನೀರು ಹರಿಯುವುದರ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ ಕಾಲುಜಾರಿ ಇಬ್ಬರು ಕೂಡಾ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಕೆಆರ್ ಎಸ್ ಜಲಾಶಯದಿಂದ ನೀರನ್ನು ಹರಿಬಿಟ್ಟಿದ್ದು, ನೀರಿನ ಹರಿವು ಹೆಚ್ಚಿದ ಹಿನ್ನೆಲೆಯಲ್ಲಿ ಇಬ್ಬರು ಕೂಡಾ ಕೊಚ್ಚಿ ಹೋಗಿದ್ದಾರೆ. ಸಾತನೂರು ಪೊಲೀಸರಿಂದ ಶವಶೋಧ ಕಾರ್ಯ ನಡೆಸಿದ್ದಾರೆ. ಆದರೆ ಇದೂವರೆಗೆ ಮೃತದೇಹಗಳು ಸಿಕ್ಕಿಲ್ಲ. ನೀರಿನ ಹರಿವು ಹೆಚ್ಚಿರುವ ಕಾರಣ ತಮಿಳುನಾಡಿನ ಗಡಿಭಾಗಕ್ಕೆ ಮೃತದೇಹಗಳು ಕೊಚ್ಚಿ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಘಟನೆ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
 


ಸಂಬಂಧಿತ ಟ್ಯಾಗ್ಗಳು

selfie death ಕೆ.ಆರ್.ಎಸ್ ಜಲಾಶಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ