ಮಲೆನಾಡು, ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ

Heavy rain at malnad and western ghats

17-07-2018

ಬೆಂಗಳೂರು: ರಾಜ್ಯದ ಕಾವೇರಿ ಜಲಾನಯನ ಪ್ರದೇಶ, ಮಲೆನಾಡು ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ಸಾಮಾನ್ಯ ಜನಜೀವನಕ್ಕೆ ತೊಂದರೆಯಾಗಿದೆ.
ಗಾಳಿ ಸಹಿತ ಭಾರೀ ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಕಳೆದೊಂದು ವಾರದಿಂದ ಅನೇಕ ಗ್ರಾಮಗಳ ಜನರು ಕತ್ತಲಲ್ಲಿ ರಾತ್ರಿ ಕಳೆಯುತ್ತಿದ್ದಾರೆ. ಭಟ್ಕಳದಲ್ಲಿ ಬಸ್ ತಂಗುದಾಣ ಕುಸಿದು ಬಿದ್ದಿದ್ದು, ಯಾವುದೇ ಸಾವುನೋವು ಸಂಭವಿಸಿಲ್ಲ.

ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ 519ಅಡಿಗೆ ಏರಿದೆ. ನದಿ ಪಾತ್ರದ ಜನರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣ, ದೂದ್‍ಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳು ತುಂಬಿ ಹರಿಯುತ್ತಿವೆ. ನಾಗನೂರು-ಸಂಕೇಶ್ವರ ಸೇತುವೆ ಪ್ರವಾಹದಲ್ಲಿ ಮುಳುಗಿರುವುದರಿಂದ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಖ್ಯಾತ ರಂಗನತಿಟ್ಟು ಪಕ್ಷಿಧಾಮ, ತಲಕಾಡು ಮತ್ತು ಬೃಂದಾವನ ಉದ್ಯಾನವನ್ನು ಸಾರ್ವಜನಿಕರಿಗೆ ಮುಚ್ಚಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ