ಪತ್ನಿ ವರ್ತನೆಯಿಂದ ಬೇಸತ್ತ ಪತಿ ಅತ್ಮಹತ್ಯೆ!

suicide

17-07-2018

ಬೆಂಗಳೂರು: ನಗರದ ಹೊರವಲಯದ ಚಿಕ್ಕಬಿದರಕಲ್ಲಿನಲ್ಲಿ ಸಾಲಗಾರರ ಕಾಟ ತಾಳಲಾರದೇ ಡೆತ್ ನೋಟ್ ಬರೆದಿಟ್ಟು ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಟೈಲರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಚಿಕ್ಕಬಿದರಕಲ್ಲುವಿನ ಸ್ವಾಮಿ(30)ಎಂದು ಆತ್ಮಹತ್ಯೆಗೆ ಶರಣಾದವರನ್ನು ಗುರುತಿಸಲಾಗಿದೆ. ಟೈಲರ್  ಕೆಲಸ ಮಾಡಿಕೊಂಡಿದ್ದ ಸ್ವಾಮಿ ಅವರಿವರ ಬಳಿ ಸಾಲ ಮಾಡಿಕೊಂಡಿದ್ದರು, ಸಾಲಗಾರರ ಕಾಟದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ಸ್ವಾಮಿ ಪುತ್ರ ಕೂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಅಲ್ಲದೆ ಲಕ್ಷ್ಮೀ ವೆಂಕಟೇಶ್ವರ ಅಂಗಡಿಯವರು ಹಣದ ವಿಚಾರದಲ್ಲಿ ಕಾಟ ನೀಡುತ್ತಿದ್ದರು ಎಂದು ಸ್ವಾಮಿ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದೆಡೆ ಅಕ್ರಮ ಸಂಬಂಧ ಹಿನ್ನೆಲೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಜ್ಞಾನಗಂಗಾನಗರದಲ್ಲಿ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಪತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜ್ಞಾನಗಂಗಾನಗರದ ಯೋಗೇಶ್(37) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯೋಗೀಶ್ ಬಿಎಂಟಿಸಿ ಕಂಡಕ್ಟರ್ ಆಗಿದ್ದ ಲತಾ ಅವರನ್ನು ವಿವಾಹವಾಗಿದ್ದರು. ಲತಾಗೆ ಬಸ್ ಚಾಲಕರೊಬ್ಬರ ಜೊತೆ ಅಕ್ರಮ ಸಂಬಂಧವಿತ್ತು. ಈ ಬಗ್ಗೆ ಯೋಗೇಶ್ ತನ್ನ ಪತ್ನಿಗೆ ಸಾಕಷ್ಟು ಬುದ್ಧಿವಾದ ಹೇಳಿದ್ದರು.
ಊರಿನ ಹಿರಿಯರ ನೇತೃತ್ವದಲ್ಲಿ ಒಂದೆರಡು ಬಾರಿ ರಾಜಿ ಪಂಚಾಯಿತಿ ಕೂಡ ಆಗಿತ್ತು. ಎಷ್ಟು ನ್ಯಾಯ ಪಂಚಾಯ್ತಿ ಮಾಡಿ ಬುದ್ಧಿ ಹೇಳಿದರೂ ಹೆಂಡತಿ ತನ್ನ ವರ್ತನೆಯನ್ನು ಬದಲಾಯಿಸಿಕೊಂಡಿಲ್ಲ ಎಂದು ಡೆತ್ ನೋಟ್‍ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ