ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರ ಸಾವು

electric wire shock 2 death

18-07-2018

ಉತ್ತರ ಕನ್ನಡ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಡುಂಡ್ಯಾನಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಸುಬ್ರಾಯ ಗೋಪಾಲ ಭಟ್ (60), ಗೋಪಾಲಕೃಷ್ಣ ರಾಮಚಂದ್ರ ಹೆಗಡೆ (50) ಹೊಲದಲ್ಲಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುವಾಗ, ರಸ್ತೆಯಲ್ಲಿ ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

death farmers ವಿದ್ಯುತ್ ತಂತಿ ಹೊಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ