ಹಾಸ್ಟೆಲ್ ವಿದ್ಯಾರ್ಧಿಗಳಿಗೆ ತಿಳಿ ಸಾರು, ಅನ್ನ ಸಾಕೆ?

hostel students protest!

18-07-2018

ಕಲಬುರಗಿ: ಸರ್ಕಾರದ ವಸತಿ ನಿಲಯದಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ ಎಂದು ವಿದ್ಯಾರ್ಧಿಗಳು ಪ್ರತಿಭಟನೆ ನಡೆಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲ್ಲೂಕಿನ ಕೊಲ್ಲೂರ ಗ್ರಾಮದ ಸರ್ಕಾರಿ ಬಾಲಕರ ವಸತಿನಿಲಯದ ಅವ್ಯವಸ್ಥೆಯಿಂದ ರೋಸಿ ಹೋದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ತಾಲ್ಲೂಕಿನ ಕೊಲ್ಲೂರು ಬಳಿ ರಸ್ತೆ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಳಿ ಸಾರು, ಬಿಳಿ ಅನ್ನ ಬಿಟ್ಟರೆ ಮತ್ತೇನೂ ನೀಡಲಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ. ಸಮಾಜಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಹಾಸ್ಟೆಲ್ ಗಳ ಸ್ಥಿತಿ ಈ ರೀತಿಯಾದರೆ ಹೇಗೆ..? ಎಂದು ಹಲವರು ಪ್ರಶ್ನಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

students protest ವಸತಿ ನಿಲಯ ರಸ್ತೆ ತಡೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ