ಉಚಿತ ಬಸ್ ಪಾಸ್ ಗಾಗಿ ಬೀದಿಗಿಳಿದ ವಿದ್ಯಾರ್ಥಿಗಳು

students demanding for free bus pass

18-07-2018

ಹುಬ್ಬಳ್ಳಿ: ಉಚಿತ ಬಸ್ ಪಾಸ್ ಗಾಗಿ ಬೀದಿಗಿಳಿದ ವಿದ್ಯಾರ್ಥಿಗಳು ಹುಬ್ಬಳ್ಳಿಯಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಎಬಿವಿಪಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿ ವಿದ್ಯಾನಗರದಿಂದ ಹೋರಟು ತಹಶೀಲ್ದಾರ ಕಚೇರಿವರೆಗೂ ನಡೆಯಿತು. ಪ್ರತಿಭಟನೆಯಲ್ಲಿ ಸಿಎಂ ಕುಮಾರಸ್ವಾಮಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಇದೇ ವೇಳೆ ಸಿಎಂ ಕುಮಾರಸ್ವಾಮಿ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಸಮಾನವಾಗಿ ಉಚಿತ ಬಸ್ ಪಾಸ್ ವಿತರಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ನಗರದ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

Bus Pass Students ಎಬಿವಿಪಿ ಮುಖ್ಯಮಂತ್ರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ