ಸಿಎಂ ವಿರುದ್ಧ ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ!

controversial statement about cm kumaraswamy by congress leader k.b chandrashekar!

18-07-2018

ಮಂಡ್ಯ: ಹಿರಿಯ ಕಾಂಗ್ರೆಸ್ ಮುಖಂಡ ಕೆ.ಬಿ.ಚಂದ್ರಶೇಖರ್ ಅವರು ಸಿಎಂ ಕುಮಾರಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕೆ.ಆರ್.ಪೇಟೆಯ ಪ್ರವಾಸಿ ಮಂದಿರದಲ್ಲಿ‌ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಚಂದ್ರಶೇಖರ್, ‘ಕುಮಾರಸ್ವಾಮಿಗೆ ಮತ ಹಾಕಿದ ಜನ ಉಗಿಯುತ್ತಿದ್ದಾರೆ’ ಎಂದು ಏಕವಚನದಲ್ಲೇ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡುತ್ತಾರೆ ಎಂದು ಜನ ಮತ ಹಾಕಿದ್ದರು. ಆದರೆ, ಸಿಎಂ‌ ಆದ ಮೇಲೆ ಕುಮಾರಸ್ವಾಮಿ ಏನ್ ಮಾಡಿದರೂ ಅನ್ನೋದು ಜನಕ್ಕೆ ಗೊತ್ತಾಗಿದೆ. ಬಹಳ ಜನ, ಮಹಿಳೆಯರೂ ಸಹ ಕುಮಾರಸ್ವಾಮಿ ಸಾಲಮನ್ನಾ ಮಾಡುತ್ತಾರೆ ಎಂದು ಮತ ಹಾಕಿದ್ದರು. ಆದರೆ, ಇದೀಗ ಕುಮಾರಸ್ವಾಮಿಗೆ ಉಗಿಯುತ್ತಿದ್ದಾರೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿದ್ದರೂ ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷ ಮುಜುಗರಕ್ಕೀಡಾಗಿದೆ. ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೆ.ಆರ್.ಪೇಟೆ ಕ್ಷೇತ್ರದಿಂದ ಸ್ಪರ್ಧಿಸಿ ಜೆಡಿಎಸ್ ಅಭ್ಯರ್ಥಿ ವಿರುದ್ಧ ಸೋತಿದ್ದರು ಕೆ.ಬಿ.ಚಂದ್ರಶೇಖರ್.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ