ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಒಂದೂ ಭ್ರಷ್ಟಾಚಾರ ಹಗರಣವೂ ನಡೆದಿಲ್ಲ !

Kannada News

29-05-2017

ಮೈಸೂರು:- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ ಮುಕ್ತವಾದ ಆಡಳಿತ ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ರಾಜ್ಯ ಸಚಿವ ಕೃಷ್ಣ ಪಾಲ್ ಗುರ್ಜರ್ ಮೈಸೂರಿನಲ್ಲಿ ಹೇಳಿದ್ದಾರೆ. ಪ್ರಧಾನಿ ಮೋದಿ ಕಡಿಮೆ ಮಾತನಾಡಿದರೂ, ಹೆಚ್ಚಿನ ಕೆಲಸ ಮಾಡಿ ತೋರಿಸಿದ್ದಾರೆ. ಮೋದಿ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಕಳೆದ ಮೂರು ವರ್ಷದ ಅವಧಿಯಲ್ಲಿ ದೇಶವನ್ನು ಭ್ರಷ್ಟಾಚಾರ ಮುಕ್ತ ಮಾಡಲು ಪ್ರಧಾನಿ ಮೋದಿ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಎಲ್ಲಾ ವರ್ಗದ ಜನರ ಏಳಿಗೆಗಾಗಿ ಅಭಿವೃದ್ಧಿ ಕಾರ್ಯಗಳನ್ನು ಪ್ರಕಟಿಸಲಾಗಿದೆ. ಕಳೆದ ಮೂರು ವರ್ಷಗಳ ಆಡಳಿತದಲ್ಲಿ ಒಂದೂ ಭ್ರಷ್ಟಾಚಾರ ಹಗರಣ ನಡೆದಿಲ್ಲ. ಜಾತಿ ರಾಜಕಾರಣ, ತುಷ್ಠೀಕರಣ ರಾಜಕೀಯ ಕೊನೆಗೊಂಡಿದೆ ಎಂದರು. ದೇಶದ ಜಿ.ಡಿ.ಪಿ ದರ ಏರಿಕೆಯಾಗಿದೆ, ಇದರ ಪರಿಣಾಮ ಇತ್ತೀಚೆಗೆ ನಡೆದ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಪಡೆದಿದೆ ಎಂದು ಪ್ರತಿಪಾದಿಸಿದರು.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ